Sunday, May 5, 2024
spot_imgspot_img
spot_imgspot_img

ಪುತ್ತೂರು ಜಿಲ್ಲೆಯ ಅತಿ ದೊಡ್ಡ ಬಸ್ ನಿಲ್ದಾಣಕ್ಕೆ ಅವಳಿ ವೀರರ ಹೆಸರು

- Advertisement -G L Acharya panikkar
- Advertisement -

ಪುತ್ತೂರು: ಸರಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣವೆಂಬ ಖ್ಯಾತಿಗೆ ಪಾತ್ರವಾಗಿರುವ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿನಲ್ಲಿ ರಾರಾಜಿಸಲಿದೆ. ಕೆ.ಎಸ್.ಆರ್.ಟಿ.ಸಿ ಯು ಕೋಟಿ ಚೆನ್ನಯರ ಹೆಸರನ್ನು ಪುತ್ತೂರು ಬಸ್ ನಿಲ್ದಾಣಕ್ಕೆ ಇಡುವ ಸಂಬಂಧ ನಿರ್ಣಯ ಕೈಗೊಂಡಿದ್ದು, ಶೀಘ್ರದಲ್ಲೇ ಅನುಷ್ಠಾನಕ್ಕೆ ಬರಲಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಬೆಂಬಿಡದ ಪ್ರಯತ್ನದ ಫಲವಾಗಿ ಯೋಜನೆ ಕೈಗೂಡಿದ್ದು, ಬಹುತೇಕ ಮುಂದಿನ ತಿಂಗಳು ನಾಮಕರಣ ಸಮಾರಂಭ ನಡೆಯುವ ಸಾಧ್ಯತೆ ಇದೆ.

ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು

ಈ ವಿಚಾರವನ್ನು ಶಾಸಕ ಮಠಂದೂರು ಖಚಿತಪಡಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಎಂ. ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುತ್ತೂರು ಬಸ್ ನಿಲ್ದಾಣಕ್ಕೆ “ಕೋಟಿ ಚೆನ್ನಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಪುತ್ತೂರು’ ಎಂದು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರ ಗಣ್ಯರ ಸಮಕ್ಷಮ ಚಾರಿತ್ರಿಕ ಸಮಾರಂಭ ಶೀಘ್ರ ನಡೆಯಲಿದೆ ಎಂದವರು ತಿಳಿಸಿದ್ದಾರೆ.

vtv vitla

ಪುತ್ತೂರು ನಗರಸಭೆ 2020ರಲ್ಲಿ ಕೋಟಿ ಚೆನ್ನಯರ ಅಭಿದಾನವನ್ನು ಬಸ್ ನಿಲ್ದಾಣಕ್ಕೆ ನೀಡುವ ನಿರ್ಣಯ ಅಂಗೀಕರಿಸಿ ಸರಕಾರಕ್ಕೆ ಕಳುಹಿಸಿತ್ತು. ಶಾಸಕ ಸಂಜೀವ ಮಠಂದೂರು ಸರಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ, ನಗರಸಭೆ ನಿರ್ಣಯದ ಪ್ರತಿಯನ್ನು ತಮ್ಮ ಶಿಫಾರಸು ಪತ್ರದ ಮೂಲಕ ಕೆ.ಎಸ್.ಆರ್.ಟಿ.ಸಿ ಸಲ್ಲಿಸಿದ್ದರು. ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಚಂದ್ರಪ್ಪ ಜತೆ ಮಾತುಕತೆ ನಡೆಸಿದ್ದರು.

vtv vitla
vtv vitla
- Advertisement -

Related news

error: Content is protected !!