Friday, October 16, 2026
spot_imgspot_img
spot_imgspot_img

ಪುತ್ತೂರು: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಚಾಲಕ ಮೃತ್ಯು!

- Advertisement -
- Advertisement -

ಪುತ್ತೂರು: ಕಾರೊಂದು ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಪುತ್ತೂರಿನ ಕೆಮ್ಮಾಯಿಯಲ್ಲಿ ನಡೆದಿದೆ.

ಕಾರು‌ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡಿದ್ದು ಅವರನ್ನು ಆದರ್ಶ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ದಯಾನಂದ ರವರ ಸಹಾಯದೊಂದಿಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸಾವನ್ನಪ್ಪಿದವರನ್ನು ಬೆಳ್ತಂಗಡಿ ಬಾರ್ಯ ನಿವಾಸಿ ಅರುಣ್ ಕುಮಾರ್ ಎಂದು ಗುರುತಿಸಲಾಗಿದ್ದು. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!