Tuesday, June 9, 2026
spot_imgspot_img
spot_imgspot_img

ಪುತ್ತೂರು : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಜಾಮೀನು ಮಂಜೂರು

- Advertisement -
- Advertisement -

ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆತಂದ ಪೋಲಿಸರು..!!

ಪುತ್ತಿಲ ಪರಿವಾರ ಸಂಸ್ಥಾಪಕ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ದೂರು ಸಲ್ಲಿಸಿದ್ದ ಸಂತ್ರಸ್ಥೆಯ ಮೆಡಿಕಲ್ ಟೆಸ್ಟ್ ನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ.

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಪುತ್ತೂರು‌ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ನೀಡಿದ ದೂರಿನ ಹಿನ್ನಲೆ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ ಮೆಡಿಕಲ್ ಟೆಸ್ಟ್ ಗೆ ಸರಕಾರಿ ಆಸ್ಪತ್ರೆಯಲ್ಲಿ ಮಾಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಸ್ಸಿ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆ ಆರಂಭಿಸುವುದಾಗಿ ಅರುಣ್ ಕುಮಾ‌ರ್ ಪುತ್ತಿಲ ಪ್ರತಿಕ್ರಿಯಿಸಿದ್ದಾರೆ.

- Advertisement -

Related news

error: Content is protected !!