Monday, April 29, 2024
spot_imgspot_img
spot_imgspot_img

ಪುತ್ತೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಬಲಾತ್ಕಾರ ಎಸಗಿದ ಪ್ರಕರಣ : ಆರೋಪಿ ಖುಲಾಸೆ

- Advertisement -G L Acharya panikkar
- Advertisement -

ಪುತ್ತೂರು: ಆರು ವರ್ಷಗಳ ಹಿಂದಿನ ಈ ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಕುದ್ರಡ್ಕ ನಿವಾಸಿ ಪ್ರಶಾಂತ್ ಯಾನೆ ನಾರಾಯಣರವರನ್ನು ಜಿಲ್ಲಾ ನ್ಯಾಯಾಲಯವು ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ.

ದಿನಾಂಕ 26.12.2017 ರಂದು ಬೆಳ್ತಂಗಡಿ ತಾಲೂಕು, ಮಚ್ಚಿನ ಗ್ರಾಮದ ಕುದ್ರಡ್ಕ ಎಂಬಲ್ಲಿ ರಾತ್ರಿ ವೇಳೆಯಲ್ಲಿ ಆರೋಪಿಯನ್ನಲಾಗಿದ್ದ ಪ್ರಶಾಂತ್ ಯಾನೆ ನಾರಾಯಣ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆಕೆಯ ಮನೆಯವರು ತಿಳಿಸಿದಂತೆ ನೊಂದ ಬಾಲಕಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದರು. ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 417,376(2)(o),506 ಮತ್ತು ಪೋಕ್ಸೋ ಕಾಯ್ದೆಯ ಕಲಂ 6ರ ಅನ್ವಯದಂತೆ ಪ್ರಕರಣ ದಾಖಲಿಸಿದ್ದರು.

ತನಿಖೆ ಮುಂದುವರಿಸಿ ಆರೋಪಿ ಎನ್ನಲಾಗಿದ್ದ ಪ್ರಶಾಂತ್ ಯಾನೆ ನಾರಾಯಣರವರನ್ನು ದಸ್ತಗಿರಿ ಮಾಡಿಲಾಗಿತ್ತು. ನಂತರ ಪೊಲೀಸರು ಆರೋಪಿಯ ವಿರುದ್ಧ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಮಾನ್ಯ ಉಚ್ಚ ನ್ಯಾಯಾಲಯದ ಆದೇಶದಂತೆ, ಮಂಗಳೂರಿನ ಎರಡನೇ ಜಿಲ್ಲಾ ನ್ಯಾಯಾಲಯದಲ್ಲಿದ್ದ ಪ್ರಕರಣವು ಈ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿರುತ್ತದೆ. ನ್ಯಾಯಾಲಯವು ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡು ಸುಮಾರು 22 ಸಾಕ್ಷಿಗಳ ಪೈಕಿ 16 ಸಾಕ್ಷಿಗಳನ್ನು ತನಿಖೆ ನಡೆಸಿತ್ತು.

ದೂರಿನ ಸಲ್ಲಿಕೆಯಲ್ಲಿನ ವಿಳಂಬ, ಬಾಲಕಿಯ ವಯಸ್ಸಿನ ಕುರಿತ ವೈದ್ಯರ ಹೇಳಿಕೆ ಆರೋಪಿಯು ಈ ಕೃತ್ಯ ನಡೆಸಿದ್ದಾನೆ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ. ಸೂಕ್ತ ವೈಜ್ಞಾನಿಕ ಸಾಕ್ಷ್ಯಧಾರ ಮತ್ತು ದಾಖಲೆಗಳ ಕೊರತೆ, ತನಿಖೆಯಲ್ಲಿನ ವಿರೋಧಾಭಾಸಗಳು, ಇವುಗಳ ಹಿನ್ನಲೆಯಲ್ಲಿ ಪ್ರಾಸಿಕ್ಯೂಷನ್ ಈ ಪ್ರಕರಣವನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ವಿಫಲಗೊಂಡಿದೆ ಎಂದು ತೀರ್ಮಾನಿಸಿ.

ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶ್ರೀಕಾಂತರಾಜು ಎಸ್. ವಿ ರವರು ಆರೋಪಿಯನ್ನು ನಿರ್ದೋಷಿ ಎಂದು ಆದೇಶಿಸಿರುತ್ತಾರೆ. ಆರೋಪಿ ಪರ ವಕೀಲ ಪುತ್ತೂರಿನ ಕಜೆ ಲಾ ಚೇಂಬರ್ಸ್ ಮಹೇಶ್ ಕಜೆ ಮತ್ತು ಮಂಗಳೂರಿನ ರಾಜೇಶ್ ರೈಯವರು ವಾದಿಸಿದ್ದರು.

- Advertisement -

Related news

error: Content is protected !!