



ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕ ವಲಯದಲ್ಲಿ ಭಯ ಉಂಟು ಮಾಡುವಂತಹ ಸಂದೇಶವನ್ನು ಪ್ರಸಾರ ಮಾಡಿ, ಬಂದ್‌ಗೆ ಕರೆ ಕೊಟ್ಟ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಪುತ್ತೂರು ದರ್ಬೆ ಎಂಬಲ್ಲಿನ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧಿಸಿದಂತೆ, ದಿನೇಶ್ ಪಂಜಿಗ ಎಂಬ ವಾಟ್ಸಾಪ್ ಖಾತೆಯನ್ನು ಹೊಂದಿರುವ ವ್ಯಕ್ತಿಯು ಸಾಮಾಜಿಕ ಜಾಲತಾಣದ(ವಾಟ್ಸಾಪ್) ಮೂಲಕ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕ ವಲಯದಲ್ಲಿ ಭಯ ಉಂಟು ಮಾಡುವಂತಹ ಸಂದೇಶವನ್ನು ಪ್ರಸಾರ ಮಾಡಿ, ಬಂದ್‌ಗೆ ಕರೆಕೊಟ್ಟು ಜನರು ಅಕ್ರಮ ಕೂಟ ಸೇರಿ ಕಾನೂನುಬಾಹಿರ ಕೃತ್ಯ ಎಸಗಲು ದುಷ್ಪ್ರೇರಣೆ ನೀಡಿರುವುದು ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಸಂದೇಶವನ್ನು ಪ್ರಸಾರ ಮಾಡಿದ ದಿನೇಶ್ ಪಂಜಿಗ ಎಂಬ ವಾಟ್ಸಾಪ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 100/2026, ಕಲಂ: 353(2), 57, 189 BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.








