




ಪುತ್ತೂರು: ವಿಶ್ವ ಹಿಂದೂ ಪರಿಷದ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಂಟಿ ಆಶ್ರಯದಲ್ಲಿ ಪುತ್ತೂರಿನ ದರ್ಬೆ ಸಮೀಪ ಜೆರಾಕ್ಸ್ ಅಂಗಡಿಯಲ್ಲಿ ಹಿಂದೂ ಅಂಗಡಿ ಮಾಲೀಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಬಂಧಿಸದ ಪೊಲೀಸರ ಧೋರಣೆಯನ್ನು ಖಂಡಿಸಿ ಇಂದು ಪುತ್ತೂರು ಚಲೋ ಕಾರ್ಯಕ್ರಮ ನಡೆಯಿತು.
ದರ್ಬೆ ಸಮೀಪದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಮುಖ್ಯರಸ್ತೆಯಾಗಿ ಸಾಗಿ, ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ಹಿಂದು ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸಮಿತಿ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ವಿಎಚ್ಪಿ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಬಜರಂಗದಳ ವಿಭಾಗ ಸಂಯೋಜಕ ಪುನೀತ್ ಅತ್ತಾವರ, ಹಿಂದು ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಸಂಯೋಜಕರಾದ ಮೋಹನದಾಸ ಕಾಣಿಯೂರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿಗಳಾದ ಶರಣ್ ಪಂಪ್ವೆಲ್ ,ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ , ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ಉಲ್ಲಾಸ್ ಕೆ.ಟಿ, ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಭುಜಂಗ ಕುಲಾಲ್ ,ವಿಶ್ವ ಹಿಂದೂ ಪರಿಷದ್ ಪ್ರಾಂತ ಪ್ರಚಾರ ಪ್ರಸಾರ ಪ್ರಮುಖರಾದ ಪ್ರದೀಪ್ ಸರಿಪಲ್ಲ ,ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಕಾರ್ಯದರ್ಶಿ ಶಿವಾನಂದ ಮೆಂಡನ್, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕರಾದ ದಿನೇಶ್ ಪಂಜಿಗ, ಭರತ್ ಈಶ್ವರಮಂಗಲ, ನರಸಿಂಹ ಮಾಣಿ, ಪ್ರಶಾಂತ್ ಬಂಟ್ವಾಳ, ವಿಧಾನಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಬೊಟ್ಯಾಡಿ, ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ, ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಪುತ್ತೂರು ಮಾಜಿ ಶಾಸಕರಾದ ಸಂಜೀವ ಮಠಂದೂರು, ಭಾ.ಜ.ಪಾ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಉಜಿರೆಮಾರ್, ಭಾ.ಜ.ಪಾ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಕಲ್ಲಿಮಾರ್, ಪ್ರಮುಖರಾದ ಮುರಳಿಕೃಷ್ಣ ಹಸಂತಡ್ಕ, ಸಂತೋಪ್ ಕೈಕಾರ, ಬಜರಂಗದಳ ಜಿಲ್ಲಾ ಸಹ ಸಂಯೋಜಕರಾದ ಪ್ರವೀಣ್ ಕಲ್ಲೇಗ, ದಿನೇಶ್ ಚಾರ್ಮಾಡಿ, ಸಂತೋಷ್ ಉಪ್ಪಿನಂಗಡಿ, ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ, ವಿಶ್ವ ಹಿಂದೂ ಪರಿಷದ್ ಗ್ರಾಮಾಂತರ ಪ್ರಖಂಡ ಅಧ್ಯಕ್ಷರಾದ ಜಯಂತ್ ಶೆಟ್ಟಿ ಕಂಬಳತ್ತಡ್ಡ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸಹ ಕಾರ್ಯದರ್ಶಿ ಪ್ರಮೋದ್ ಕಡಬ, ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡ್ ಮತ್ತು ಹಲವು ಪ್ರಮುಖರು ಉಪಸ್ಥಿತರಿದ್ದರು








