Monday, May 13, 2024
spot_imgspot_img
spot_imgspot_img

ಪುತ್ತೂರು: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಳಸಿಕೊಂಡು ಭಿಕ್ಷಾಟನೆ; ಚೈಲ್ಡ್ ಹೆಲ್ಪ್ ಲೈನ್ ಅಧಿಕಾರಿಗಳಿಂದ ದಾಳಿ; ಮಕ್ಕಳ ರಕ್ಷಣೆ

- Advertisement -G L Acharya panikkar
- Advertisement -
driving

ಪುತ್ತೂರು: ಬೇರೆಯವರ ಮಕ್ಕಳನ್ನು ತನ್ನೊಂದಿಗೆ ಇರಿಸಿಕೊಂಡು ಬಿಕ್ಷಾಟನೆ ಮಾಡಿಸುತ್ತಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದ್ದು,

ಈ ಬಗ್ಗೆ ಸಾರ್ವಜನಿಕರಿಂದ ಚೈಲ್ಡ್ ಲೈನ್ 1098 ಹೆಲ್ಪ್ ಲೈನ್ ಗೆ ಬಂದ ಮಾಹಿತಿ ಮೇರೆಗೆ ಚೈಲ್ಡ್ ಹೆಲ್ಪ್ ಲೈನ್ ಕೇಂದ್ರ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಸೆ.13 ರಂದು ನಡೆದಿದೆ.

ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಹಿಡಿದುಕೊಂಡು ಸುರತ್ಕಲ್ ಮೂಲದ ಮಹಿಳೆಯೊಬ್ಬರು ಪುತ್ತೂರು ತಾಲೂಕಿನ ಖಾಸಗಿ ಬಸ್ ನಿಲ್ದಾಣದ ಬಳಿ ಅಪ್ರಾಪ್ತ ವಯಸ್ಸಿನ ಮಕ್ಕಳು ಭಿಕ್ಷಟನೆಯಲ್ಲಿ ನಿರತರಾಗಿದ್ದಾರೆ ಎಂಬುದಾಗಿ ಸಾರ್ವಜನಿಕರಿಂದ ಬಂದ ಮಾಹಿತಿ ಪ್ರಕಾರ ಚೈಲ್ಡ್ ಹೆಲ್ಪ್ ಲೈನ್ ಕೇಂದ್ರ ಸಂಯೋಜಕರಾದ ದೀಕ್ಷಿತ್ ಆಚರ್ಪಡಿ ಮತ್ತು ಸದಸ್ಯರಾದ ರೇವತಿ ಹೊಸಬೆಟ್ಟು ಅಸುಂತ ಡಿಸೋಜ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯಾದ ಗಾಯತ್ರಿ ಮತ್ತು ಪುತ್ತೂರು ಮಹಿಳಾ ಪೊಲೀಸ್ ಠಾಣಾ ಸಿಬ್ಬಂದಿಗಳು ಮಕ್ಕಳಿಬ್ಬರನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಿ ಮಕ್ಕಳಿಗೆ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ಹೋರಾಟಗಾರರು ಲೋಕೇಶ್ ಗೌಡ ಆಲುಂಬುಡ ಕೇಶವ ಪಡೀಲ್ ಉಪಸ್ಥಿತರಿದ್ದರು.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ವಲಸೆ ಕಾರ್ಮಿಕ ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿಕೊಂಡಿರುತ್ತಾರೆ, ಹೆಚ್ಚಿನ ಮಕ್ಕಳನ್ನು ನಾವೀಗಲೇ ರಕ್ಷಣೆಯನ್ನು ಮಾಡಿ ಪುನರ್ವಸತಿಯನ್ನು ಕಲ್ಪಿಸಿಕೊಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯಾವುದೋ ಮಗುವನ್ನು ಎಲ್ಲಿಂದಲೋ ತಂದು ಭಿಕ್ಷಾಟನೆ ನಡೆಸುತ್ತಿರುವ ಈ ದಂಧೆಗೆ ಕಡಿವಾಣ ಹಾಕಬೇಕಾಗಿರುತ್ತದೆ. ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿಕೊಂಡಲ್ಲಿ ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡಲ್ಲಿ ಕೂಡಲೇ ಸಾರ್ವಜನಿಕರು ಚೈಲ್ಡ್ ಲೈನ್- 1098 ಸಂಖ್ಯೆ ಗೆ ಮಾಹಿತಿ ನೀಡಬಹುದಾಗಿದೆ. (ದೀಕ್ಷಿತ್ ಅಚ್ರಪ್ಪಾಡಿ)ಜಿಲ್ಲಾ ಸಂಯೋಜಕರುಚೈಲ್ಡ್ ಲೈನ್ 1098 ದ.ಕ.ಜಿಲ್ಲೆ.

- Advertisement -

Related news

error: Content is protected !!