Monday, June 30, 2025
spot_imgspot_img
spot_imgspot_img

ಪುತ್ತೂರು: ಬಿಜೆಪಿ ನಗರ ಮಂಡಲದ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

- Advertisement -
- Advertisement -

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಹಿರಿಯ ಮುತ್ಸದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು, ಲಾಲ್ ಬಹಾದ್ದೂರ್ ಶಾಸ್ತ್ರಿ , ಮಹಾತ್ಮ ಗಾಂಧಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಚಾರಣೆಗಳ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಾಗೂ ದೇವಸ್ಥಾನದ ದೇವರ ಕೆರೆ ಕಟ್ಟೆಯ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿಬಿ ಕಲ್ಲಿಮಾರ್, ನಗರ ಸಭಾ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ, ನಿಕಟಪೂರ್ವ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ , ಬಿಜೆಪಿ ನಗರ ಮಂಡಲ ಉಪಾಧ್ಯಕ್ಷ ಯುವರಾಜ್ ಕೆ ಪೆರಿಯತ್ತೋಡಿ, ವಸಂತಲಕ್ಷ್ಮಿ, ಬಿಜೆಪಿ ನಗರ ಮಂಡಲ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ, ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವರ್ಣಲತಾ ಹೆಗ್ಡೆ, ಬಿಜೆಪಿ ನಗರ ಸಭಾ ಸದಸ್ಯರಾದ ಗೌರಿ ಬನ್ನೂರು, ದೀಕ್ಷಾ ಪೈ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಜಯಶ್ರೀ ನಾಯ್ಕ್ , ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಲಕ್ಷ್ಮಿ ಶಗ್ರಿತ್ತಾಯ, ಸುನಿತಾ, ಮಹಿಳಾ ಮೋರ್ಚಾ ಸದಸ್ಯರಾದ ಸುಮತಿ , ಸರೋಜಿನಿ, ಸುಪ್ರಭಾ , ಪೂರ್ಣಿಮಾ ಬಲ್ನಾಡು , ರಾಜೀವಿ ಕುಬಲಾಜೆ , ರವಿ ಸೇರಿದಂತೆ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!