Tuesday, July 21, 2026
spot_imgspot_img
spot_imgspot_img

ಪುತ್ತೂರು: ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿ ಮೃತ್ಯು

- Advertisement -
- Advertisement -

ಪುತ್ತೂರು: ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುತ್ತೂರಿನ ಬೆಳ್ಳಿಪಾಡಿ ಗ್ರಾಮದ ಕಠಾರ ಎಂಬಲ್ಲಿ ಗುರುವಾರ(ಮೇ.21) ನಡೆದಿದೆ.

ಮೃತರನ್ನು ಗದಗ ಮೂಲದ ಕಿರಣ್ ಎಂದು ಗುರುತಿಸಲಾಗಿದ್ದು, ಕಿರಣ್ ಪುತ್ತೂರಿನ ವಿದ್ಯಾಸಂಸ್ಥೆಯೊಂದರಲ್ಲಿ ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ನಾಲ್ವರು ಯುವಕರು ಈಜಲೆಂದು ನದಿಗೆ ತೆರಳಿದ್ದರು. ಈ ವೇಳೆ ಕಿರಣ್ ಅವರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!