ವಿಡಿಯೋ ಪರಿಶೀಲನೆ ನಡೆಸುತ್ತಿರುವ ಪೊಲೀಸರು!



ಪುತ್ತೂರು ನಗರದ ದರ್ಬೆ ಜಂಕ್ಷನ್ ಬಳಿಯ ಡ್ರಿಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಮಹಮ್ಮದ್ ನೌಶಾದ್ (30) ಎಂಬಾತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ.ಕ್ರ: 79/2024, U/s: 126(2), 352, 115(2), 351(2), 3(5)ಭಾರತೀಯ ನ್ಯಾಯ ಸಂಹಿತೆಯ (BNS), 2023 ರಂತೆ ಪ್ರಕರಣ ದಾಖಲಾಗಿರುತ್ತದೆ
ಇದಲ್ಲದೆ, 2026ರ ಆಗಸ್ಟ್ 21ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮಹಮ್ಮದ್ ನೌಶಾದ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣಗಳಿಗೆ ಹೊರತಾಗಿ ಆತನ ವಿರುದ್ಧ ಇನ್ನಿತರ ಪ್ರಕರಣಗಳಿವೆಯೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಮಹಮ್ಮದ್ ನೌಶಾದ್ನನ್ನು ದಸ್ತಗಿರಿ ಮಾಡಲಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಲಭ್ಯವಿರುವ ವಿಡಿಯೋಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪರಿಶೀಲನೆಯ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.








