ಸತತ 4ನೇ ಬಾರಿಗೆ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಯ್ ಅಬ್ರಹಾಂ ಆಯ್ಕೆ





ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪ್ರತಿಷ್ಠಿತ ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ರಾಯ್ ಅಬ್ರಹಾಂ ಪದವು ಕುಂತೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರೂ ಸತತ 4ನೇ ಬಾರಿಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಸೆ.23 ರ೦ದು ಬೆಳಿಗ್ಗೆ ನೆಲ್ಯಾಡಿಯಲ್ಲಿರುವ ಸಂಘದ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಈ ಸಂದರ್ಭದಲ್ಲಿ ನಿರ್ದೇಶಕ ಕೇಶವ ಭಂಡಾರಿ ಕೆ.ಕೈಪ ಕೋಡಿಂಬಾಡಿ, ಜಾರ್ಜ್ ಕುಟ್ಟಿಸಿ.ನಿಡ್ಯಡ್ಕ ಇಚ್ಚಂಪಾಡಿ, ರಮೇಶ್ ಕಲ್ಪುರೆ 102 ನೆಕ್ಕಿಲಾಡಿ ಮರ್ದಾಳ, ವ್ಯಾಸ ಎನ್.ವಿ. ನೆಕ್ಕರ್ಲ ಕೌಕ್ರಾಡಿ, ಶ್ರೀರಾಮ ಪಕ್ಕಳ ಕರ್ನೂರುಗುತ್ತು ನೆಟ್ಟಣಿಗೆ ಮುಡೂರು, ಸತ್ಯಾನಂದ ಬಿ.ಬೊಳ್ಳಾಜೆ ನೂಜಿಬಾಳ್ತಿಲ, ಗಿರೀಶ್ ಸಾಲಿಯಾನ್ ಬಿ. ಬದನೆ ಇಚ್ಚಂಪಾಡಿ, ಜಯರಾಮ ಬಿ.ಬಾಣಜಾಲು ಕೌಕ್ರಾಡಿ, ಅರುಣಾಕ್ಷಿ ಅಕ್ಷಯ ನಿಲಯ ಪುಚ್ಚೇರಿ ನೆಲ್ಯಾಡಿ, ಗ್ರೇಸಿ ನೈನಾನ್ ಸ್ನೇಹ ಸದನ ನೆಲ್ಯಾಡಿ ಹಾಗೂ ಸುಭಾಸ್ ನಾಯಕ್ ನೆಕ್ರಾಜೆ ಕೋಡಿಂಬಾಡಿ ಉಪಸ್ಥಿತರಿದ್ದರು.
4ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಪುತ್ತೂರು ಕೊಂಬೆಟ್ಟು ರೈ ಬಂಗ್ಲ ನಿವಾಸಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅವರು 2010ಕ್ಕೆ ಮೊದಲ ಬಾರಿಗೆ ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಗೊಂಡಿದ್ದು ಅದೇ ವರ್ಷ ಸಂಘದ ಅಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದರು. ಆ ಬಳಿಕ 2015, 2020ರಲ್ಲಿ ನಡೆದ ಚುನಾವಣೆಯಲ್ಲೂ ನಿರ್ದೇಶಕರಾಗಿ ಆಯ್ಕೆಯಾಗಿ ಬಳಿಕ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೀಗ 4ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇವರು ದ.ಕ.ಜಿಲ್ಲಾ ಸಹಕಾರಿ ಅಧ್ಯಕ್ಷರಾಗಿ ಈ ಹಿಂದೆ ಸೇವೆ ಸಲ್ಲಿಸಿದ್ದರು. ಪ್ರಸ್ತುತ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೋಸೈಟಿ ನಿರ್ದೇಶಕರಾಗಿ ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾತತ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
4ನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಡಬ ತಾಲೂಕಿನ ಕುಂತೂರುಪದವು ನಿವಾಸಿ ರಾಯ್ ಅಬ್ರಹಾಂ ಅವರು ಸಹ 2010ರಲ್ಲಿ ಮೊದಲ ಬಾರಿಗೆ ನಿರ್ದೇಶಕರಾಗಿ ಆಯ್ಕೆಗೊಂಡು ಅದೇ ವರ್ಷ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಆ ಬಳಿಕ 2015, 2020ರಲ್ಲಿ ನಡೆದ ಚುನಾವಣೆಯಲ್ಲೂ ನಿರ್ದೇಶ ಕರಾಗಿ ಆಯ್ಕೆಗೊಂಡು ಉಪಾಧ್ಯಕ್ಷರಾಗಿದ್ದರು. ಇದೀಗ ಮತ್ತೆ 4ನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಕಡಬ ತಾಲೂಕಿನ ಕುಂತೂರುಪದವು ಸಂತಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ಸಂಚಾಲಕರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕ್ರಿಶ್ಚಿಯನ್ ಆಥೋಡಕ್ಸ್‌ನ ಬ್ರಹ್ಮಾವರ ಧರ್ಮಪ್ರಾಂತ್ಯದ ಕೌನ್ಸಿಲರ್ ಮೆಂಬರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಹಲವು ಸಾಮಾಜಿಕ ಸಂಘಟನೆಗಳಲ್ಲೂ ತೊಡಗಿಕೊಂಡಿದ್ದಾರೆ.
ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಕೆ. ಆಯ್ಕೆ ಪ್ರಕ್ರಿಯೆ ನಡೆಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಪ್ರಭಾ ಕೆ.ಸಹಕರಿಸಿದರು.








