Wednesday, July 22, 2026
spot_imgspot_img
spot_imgspot_img

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಲಾರಿ ಡಿಕ್ಕಿ..!

- Advertisement -
- Advertisement -

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ನಿನ್ನೆ (ಜ.06) ತಡರಾತ್ರಿ ನಡೆದಿದೆ.

ತಮಿಳುನಾಡು ನೋಂದಣಿಯ ಸರಕು ಹೊತ್ತ ಲಾರಿ ಮಂಗಳೂರು ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದ ವೇಳೆ ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾಗಿ ಬಳಿಕ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಸರಕುಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿತ್ತು. ರಾತ್ರೋ ರಾತ್ರಿ ಲಾರಿಯನ್ನು ರಸ್ತೆಯಿಂದ ತೆರವು ಮಾಡಿ ವಾಹನ ಸಂಚಾರಕ್ಕೆ ಸುಗಮಗೊಳಿಸಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!