Tuesday, August 25, 2026
spot_imgspot_img
spot_imgspot_img

ಪುತ್ತೂರು: ಸಂಚಾರ ನಿಯಮ ಉಲ್ಲಂಘನೆ: ಸ್ಟಿಕ್ಕರ್ ಅಳವಡಿಸಿದ ವಾಹನಗಳಿಗೆ ದಂಡ

- Advertisement -
- Advertisement -

ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವಂತೆ ಗ್ಲಾಸ್‌ಗಳಿಗೆ ಸ್ಟಿಕ್ಕರ್ ಅಳವಡಿಸುವುದು, ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್ ಹಚ್ಚಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣಾ ಪೊಲೀಸರು ಕಠಿಣ ಕ್ರಮ ಕೈಗೊಂಡು ದಂಡ ವಿಧಿಸಿದ್ದಾರೆ.

ಸಾರ್ವಜನಿಕರು ಯಾವುದೇ ಉತ್ಸವ, ಹಬ್ಬ-ಹರಿದಿನಗಳು ಹಾಗೂ ಇನ್ನಿತರ ಕಾರ್ಯಕ್ರಮಗಳ ನೆಪದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

- Advertisement -

Related news

error: Content is protected !!