- Advertisement -
- Advertisement -



ಪುತ್ತೂರು: ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಿವಾಸಿ, ಸಮಾಜ ಸೇವಕಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಳಿನಿ ಲೋಕಪ್ಪಗೌಡ (74) ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆಬ್ರವರಿ 12ರಂದು ಬೆಳಗ್ಗೆ ನಿಧನರಾದರು.
ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಲೋಕಪ್ಪಗೌಡ ಅವರ ಪತ್ನಿಯಾಗಿದ್ದ ಅವರು ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. 2008ರಲ್ಲಿ ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷೆಯಾಗಿದ್ದು, ಅವರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ನೆರವೇರಿತ್ತು. 2005ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದ ಅವರು, 2010ರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಹಲವು ಕ್ಷೇತ್ರಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಜನಮನ ಗೆದ್ದಿದ್ದರು.
ಮೃತರು ಪತಿ ಲೋಕಪ್ಪಗೌಡ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
- Advertisement -








