Friday, May 17, 2024
spot_imgspot_img
spot_imgspot_img

ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ `ಶಕ್ತಿ ಯೋಜನೆ’ಗೆ ಚಾಲನೆ

- Advertisement -G L Acharya panikkar
- Advertisement -

ಪುತ್ತೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ `ಶಕ್ತಿ ಯೋಜನೆ’ಗೆ ಜೂ.11ರಂದು ಪುತ್ತೂರು ಕೋಟಿ-ಚೆನ್ನಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ದೀಪ ಬೆಳಗಿಸಿ, ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್ ವಿತರಿಸುವ ಮೂಲಕ ಶಾಸಕ ಅಶೋಕ್ ಕುಮಾರ್ ರೈ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಬಳಿಕ ಬಸ್‌ನಲ್ಲಿ ನಗರದಾದ್ಯಂತ ಪ್ರಯಾಣಿಸಿದರು.

ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ಶಿವಶಂಕರ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ., ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ನಗರ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್ ಆಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪದ್ಮಾವತಿ ಮತ್ತು ಬಳಗದವರು ಪ್ರಾರ್ಥಿಸಿದರು. ಘಟಕ ವ್ಯವಸ್ಥಾಪಕ ಇಸ್ಮಾಯಿಲ್ ಸ್ವಾಗತಿಸಿದರು. ಸಂಚಾರ ನಿಯಂತ್ರಕರಾದ ಅಬ್ಬಾಸ್ ಹಾಗೂ ವೆಂಕಟಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿ, ವಿಭಾಗೀಯ ಅಂಕಿ ಅಂಶ ಅಧಿಕಾರಿ ಹರೀಶ್ ಕೊಟ್ಟಾರಿ ವಂದಿಸಿದರು.

- Advertisement -

Related news

error: Content is protected !!