Thursday, March 28, 2024
spot_imgspot_img
spot_imgspot_img

ಗೆಜ್ಜೆಗಿರಿ ಕ್ಷೇತ್ರದಲ್ಲಿ ವಿವಾದದ ಕಿಚ್ಚು;ಆಡಳಿತ ಮಂಡಳಿಗೆ ಸಂಪೂರ್ಣ ಅಧಿಕಾರ ನೀಡಿದ ನ್ಯಾಯಾಲಯ

- Advertisement -G L Acharya panikkar
- Advertisement -

ಪುತ್ತೂರು: ಗೆಜ್ಜೆಗಿರಿ ಕ್ಷೇತ್ರದ ವಿವಾದಕ್ಕೆ ಸಂಬಂಧಿಸಿದಂತೆ ಪುತ್ತೂರು ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದೆ.ಶ್ರೀಧರ ಪೂಜಾರಿ ಅವರು ಗೆಜ್ಜೆಗಿರಿ ಆಡಳಿತ ಮಂಡಳಿಯ ಆಡಳಿತಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದರು.

ಅದರಂತೆ ವಿಚಾರಣೆ ನಡೆಸಿದ ನ್ಯಾಯಾಲಯ ಆಡಳಿತ ಮಂಡಳಿಯ ಆಡಳಿತಕ್ಕೆ ತಡೆಯಾಜ್ಞೆ ನೀಡದೆ ಜಾರಿಯಲ್ಲಿರುವ ಆಡಳಿತ ಮಂಡಳಿಯ ಆಡಳಿತದಲ್ಲಿಯೇ ನಿತ್ಯದ ಪೂಜೆ, ಧಾರ್ಮಿಕ ಕೈಂಕರ್ಯಗಳನ್ನು ನಡೆಸಲು ಸಮಿತಿಗೆ ಸಂಪೂರ್ಣ ಅಧಿಕಾರವನ್ನು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂದೂವರೆ ತಿಂಗಳ ಕಾಲ ಗೆಜ್ಜೆಗಿರಿ ಆಡಳಿತ ಸಮಿತಿ ಹಾಗೂ ಶ್ರೀಧರ ಪೂಜಾರಿ ಅವರ ಕಡೆಯ ನ್ಯಾಯವಾದಿಗಳಿಂದ ವಾದ ವಿವಾದ ನಡೆದಿತ್ತು.ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ಗೆಜ್ಜೆಗಿರಿಯ ಜಾಗ ಹಾಗೂ ಆಡಳಿತ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ಹೊರಡಿಸಿದೆ.

ಗೆಜ್ಜೆಗಿರಿಯಲ್ಲಿನ ಜಾಗವನ್ನು ಹೊರತು ಪಡಿಸಿ ಶ್ರೀಧರ ಪೂಜಾರಿ ಹಾಗೂ ಅವರ ಕುಟುಂಬಕ್ಕೆ ಸಂಬಂಧಿಸಿದ ಜಾಗದಲ್ಲಿ ಮಧ್ಯಪ್ರವೇಶ ಮಾಡುವಂತಿಲ್ಲ ಎಂದು ತೀರ್ಪು ನೀಡಿದ್ದು ಮುಂದಿನ ವಿಚಾರನೆ ಮಾ.29ಕ್ಕೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!