Tuesday, July 21, 2026
spot_imgspot_img
spot_imgspot_img

ಪುತ್ತೂರು: ವಿಶ್ವ ಏಡ್ಸ್ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

- Advertisement -
- Advertisement -

ಪುತ್ತೂರು: ವಿಶ್ವ ಏಡ್ಸ್ ದಿನದ ಅಂಗವಾಗಿ ಶಿಕ್ಷಣ ಸಂಪನ್ಮೂಲ ಕೇಂದ್ರ, ಪುತ್ತೂರು ಇದರ ವತಿಯಿಂದ ಮಕ್ಕಳ ಮಾನಸಿಕ ಆರೋಗ್ಯ ಪ್ರಯುಕ್ತ ಆರೋಗ್ಯ ಮಾಹಿತಿ ಕಾರ್ಯಕ್ರಮವು ದಿನಾಂಕ 01-12-2025 ರಂದು ಬೋಲ್ವಾರ್ ಇಂಡಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಸರಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ತಾರಾನಾಥ ರೈ ಕುಂಬ್ರ ಅವರು ಆಗಮಿಸಿ ಏಡ್ಸ್ ಬಗ್ಗೆ ಜಾಗೃತಿ, ಅದರ ತಡೆಗಟ್ಟುವಿಕೆ ಹಾಗೂ ಆರೋಗ್ಯ ಕಾಳಜಿ ಕುರಿತು ಮಹತ್ವದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಸ್ತಾಸಲ್ ನಾಯಕ್ ಅವರು ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆಯ ಬಗ್ಗೆ ವಿವರವಾದ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಜಾಗೃತಗೊಳಿಸಿದರು.

ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯರಾದ ನ್ಯಾಯವಾದಿ ಹರಿನಾಕ್ಷಿ ಜೆ. ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿ ಶುಭ ಹಾರೈಸಿದರು. ಕಾಲೇಜಿನ ಉಪನ್ಯಾಸಕರಾದ ಮಮತಾ ಅವರು ವಂದನಾರ್ಪಣೆ ಸಲ್ಲಿಸಿದರು. ಕೇಂದ್ರದ ಕಾರ್ಯದರ್ಶಿ ಸುಮಂಗಲ ಶೆಣೈ ಅವರು ಕಾರ್ಯಕ್ರಮದ ಸಂಯೋಜನೆಯನ್ನು ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದರು.

- Advertisement -

Related news

error: Content is protected !!