Thursday, June 4, 2026
spot_imgspot_img
spot_imgspot_img

ಪುತ್ತೂರು ಹನಿಟ್ರ್ಯಾಪ್ ಪ್ರಕರಣದಲ್ಲಿ 30 ಲಕ್ಷ ಕಳೆದುಕೊಂಡ ಯುವಕ; ಇಂದು ಮುಂಜಾನೆ ಮತ್ತಿಬ್ಬರನ್ನು ಬಂಧಿಸಿದ ಪೊಲೀಸರು..!

- Advertisement -
- Advertisement -

ಪುತ್ತೂರು: ಹನಿಟ್ರ‍್ಯಾಪ್ ಪ್ರಕರಣದಲ್ಲಿ ಯುವಕನೋರ್ವ 30 ಲಕ್ಷ ಕಳೆದುಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡಿ.ವೈ.ಎಸ್.ಪಿ ಡಾ. ಗಾನ ಪಿ. ನೇತೃತ್ವದಲ್ಲಿ ಖರ್ತನಾಕ್ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟಲು ವಿಶೇಷ ತಂಡವನ್ನು ರಚಿಸಿದ್ದು ಶರವೇಗದಲ್ಲಿ ಕಾರ್ಯಚರಣೆ ಮಾಡಿ ನಾಲ್ವರನ್ನು ಬಂಧಿಸುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು ಯುವತಿ ತನೀಶಾ ಎಂಬಾಕೆಯನ್ನು ಬಂಧಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸವಣೂರು ಸನಿಹದ ಸರ್ವೆ ಬಳಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಸವಣೂರಿನ ಅಜರ್, ನಸೀರ್ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಯುವತಿಯನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಕೂಡ ಪೊಲೀಸ್ ವಶ ಆಗಿರುವ ಮಾಹಿತಿ ಲಭಿಸಿದ್ದು
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.

ನೆಟ್ಟಣಿಗೆ ಮುನ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಅಬ್ದುಲ್ ನಾಸೀರ್ (25ವ.) ಅವರು ಹನಿಟ್ರ‍್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದು ಒಟ್ಟು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇನ್ನೋರ್ವ ಆರೋಪಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!