ಇತ್ತೀಚೆಗಿನ ದಿನಗಳಲ್ಲಿ ಮಾರಕ ಸೋಂಕು ಕೊರೊನಾ ಪುತ್ತೂರು ವಿಧಾನಸಭಾ ವ್ಯಾಪ್ತಿಯಲ್ಲೂ ಹೆಚ್ಚುತ್ತಿರುವ ಹಿನ್ನಲೆಯಲ್ಲಿ,ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲು ವಿವಿಧ ಇಲಾಖೆಗಳ ಪ್ರಮುಖರು,ಧಾರ್ಮಿಕ ಮುಖಂಡರೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತಾನಾಡಿದರು.
ಮುಂದಿನ ವಾರದಿಂದ ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.
ಇದೀಗ ಪುತ್ತೂರು ವಿಧಾನ ಸಭಾ ವ್ಯಾಪ್ತಿಯಲ್ಲೂ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆರಂಭದಲ್ಲಿ ವಿದೇಶದಿಂದ ಹಿಂತಿರುಗಿದವರಲ್ಲಿ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿತ್ತು. ಹಾಗಾಗಿ ಈ ಭಾಗದಲ್ಲಿರುವ ಕೊರೊನಾ ಪೀಡಿತರಿಗೆ ಪುತ್ತೂರು ಸರಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುವುದು.ಇದರಿಂದಾಗಿ ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಕೊವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲು ನಿರ್ಧರಿಸಲಾಗಿದೆ ಎಂದು ಮಠಂದೂರು ಮಾಹಿತಿ ನೀಡಿದ್ದಾರೆ.