Tuesday, June 9, 2026
spot_imgspot_img
spot_imgspot_img

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್- ಬೈಕ್‌ ನಡುವೆ ಡಿಕ್ಕಿ; ಸವಾರರಿಗೆ ಗಂಭೀರ ಗಾಯ..!

- Advertisement -
- Advertisement -

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್‌ನಡುವೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವಿದ್ಯಾರ್ಥಿಗಳನ್ನು ನಿಶಾಂತ್ ಮತ್ತು ಕಾರ್ತಿಕ್ ಎಂದು ಗುರುತಿಸಲಾಗಿದೆ.

ಬೈಕ್‌ ಹಾಗೂ ಕೆಎಸ್‌ಆರ್‌ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು ಅಪಘಾತದ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!