Saturday, June 20, 2026
spot_imgspot_img
spot_imgspot_img

ಪುತ್ತೂರು: KSRTC ಬಸ್ ನಿಲ್ದಾಣದಲ್ಲಿ ಯುವಕನಿಂದ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ

- Advertisement -
- Advertisement -

ಪುತ್ತೂರು: ಪುತ್ತೂರು ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಸೆ.29 ರಂದು ನಡೆದಿದೆ.

ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೇಳೆ ಯುವಕ ಬಂದು ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆಂದು ಯುವತಿ ಆರೋಪಿದ್ದಾಳೆ.

ಬಸ್ ನಿಲ್ದಾಣದಲ್ಲಿ ಕಣ್ಣೀರಿಡುತ್ತಾ ಕೂತಿದ್ದಾಗ ಇತರ ವಿದ್ಯಾರ್ಥಿಗಳು ಆಕೆಯಲ್ಲಿ ಈ ಬಗ್ಗೆ ವಿಚಾರಿಸಿದಾಗ ಕಿರುಕುಳ ನೀಡಿರುವ ಬಗ್ಗೆ ತಿಳಿಸಿದ್ದಾಳೆ. ಕಿರುಕುಳ ನೀಡಿದ ಯುವಕನ ಪೋಟೋವನ್ನು ತನ್ನ ಇನ್ಸ್ಟಾಂ ಗ್ರಾಮ್ ನಿಂದ ತೆಗೆದು ಸಹಪಾಠಿಗಳಿಗೆ ತೋರಿಸಿದ್ದಾರೆ ಎಂದು ತಿಳಿದು ಬಂದಿದೆ.

ಆ ಪೋಟೋದ ಆಧಾರದಲ್ಲಿ ಯುವಕನನ್ನು ಸೆರೆ ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಆ ಯುವಕನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಯುವಕ ಮತ್ತು ಯುವತಿ ಅಪ್ರಾಪ್ತರು ಎಂದು ತಿಳಿದುಬಂದಿದೆ. ಯುವಕನನ್ನು ಮಹಿಳಾ ಠಾಣೆಗೆ ಹಸ್ತಾಂತರಿಸಲಾಗಿದೆ.

driving
- Advertisement -

Related news

error: Content is protected !!