Saturday, June 28, 2025
spot_imgspot_img
spot_imgspot_img

ಪುತ್ತೂರು: ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯ ಜೊತೆ ಅನುಚಿತ ವರ್ತನೆ; ಕಾಮುಕ ಬಶೀರ್‌ ಪೊಲೀಸ್‌‌ ವಶಕ್ಕೆ..!

- Advertisement -
- Advertisement -

ಪುತ್ತೂರು; ಅಂಗನವಾಡಿಗೆ ಮಗುವನ್ನು ಬಿಟ್ಟು ಮನೆಗೆ ತೆರಳುತ್ತಿದ್ದ ಮಹಿಳೆಯ ಜೊತೆ ವ್ಯಕ್ತಿಯೋರ್ವ ಅಶ್ಲೀಲವಾಗಿ ವರ್ತಿಸಿದ ಘಟನೆ ಪುತ್ತೂರಿನ ಕುಂಜುರುಪಂಜದಲ್ಲಿ ನಡೆದಿದೆ.

ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಬಶೀರ್ ಎಂದು ಗುರುತಿಸಲಾಗಿದೆ.

ಮಹಿಳೆ ಅಂಗನವಾಡಿಗೆ ಮಗುವನ್ನು ಬಿಟ್ಟು ಬರುತ್ತಿದ್ದ ವೇಳೆ ಬಶೀರ್ ಮಹಿಳೆಗೆ ಡ್ಯಾಶ್‌‌ ಹೊಡೆದಿದ್ದಾನೆ. ಬಳಿಕ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಮನೆಯ ಮುಂಭಾಗದಲ್ಲಿ ಮರ್ಮಾಂಗವನ್ನು ತೋರಿಸಿ ಅಶ್ಲೀಲವಾಗಿ ವರ್ತಿಸಿದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಬೊಬ್ಬೆ ಹಾಕಿದ್ದು ಅಕ್ಕ-ಪಕ್ಕದ ಮನೆಯವರು ಹಾಗೂ ಸಾರ್ವಜನಿಕರು ಬಂದು ಆತನಿಗೆ ಹಿಗ್ಗಾಮುಗ್ಗಾ ಧಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸಂಪ್ಯ ಗ್ರಾಮಾಂತರ ಠಾಣಾ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬಶೀರ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಮೊದಲು ಈತ ಮಹಿಳೆಯರ ಜೊತೆ ಇದೇ ರೀತಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಸಾರ್ವಜನಿಕರಿಂದ ತಿಳಿದುಬಂದಿದೆ.

- Advertisement -

Related news

error: Content is protected !!