Friday, March 29, 2024
spot_imgspot_img
spot_imgspot_img

ಮಂಗಳೂರು: ಲಂಚ ಸ್ವೀಕಾರ ಪ್ರಕರಣ: ಕೊಯಿಲದ ರಫೀಕ್ ನ ಜಾಮೀನು ಅರ್ಜಿ ವಜಾ!

- Advertisement -G L Acharya panikkar
- Advertisement -

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಸಿಕ್ಕಿ ಬಿದ್ದಂತಹ ಮಂಗಳೂರು ತಾಲೂಕು ಕಛೇರಿಯ ದ್ವಿತೀಯ ದರ್ಜೆ ಸಹಾಯಕ, ಕಡಬ ತಾಲೂಕಿನ ಕೊಯಿಲ ನಿವಾಸಿ ರಫೀಕ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.

ಕೆ.ಐ.ಎ.ಡಿ.ಬಿ.ಯ ಭೂಸ್ವಾಧೀನ ಪರಿಹಾರದ ಬಗ್ಗೆ ಅರ್ಜಿ ವಿಲೇವಾರಿ ಮಾಡಲು ತೋಕೂರು ಗ್ರಾಮದ ಓಸ್ವಲ್ಡ್ ವೇಗಸ್ ಎಂಬವರಿಂದ ರೂ. 40,000/- ಲಂಚದ ಹಣ ಸ್ವೀಕರಿಸುತ್ತಿದ್ದಾಗ ಓಸ್ವಾಲ್ಡ್ ವೇಗಸ್ ರವರು ನೀಡಿದ್ದ ದೂರಿನ ಆಧಾರದಲ್ಲಿ ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳದ ಡಿ. ವೈ.ಎಸ್.ಪಿ. ಕೆ. ಸಿ. ಪ್ರಕಾಶ್ ಮತ್ತು ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ಹಾಗೂ ಗುರುರಾಜ್ ರವರ ತಂಡ ದಾಳಿ ನಡೆಸಿ ಆರೋಪಿ ರಫೀಕ್ ನನ್ನು ಜ.5ರಂದು ಬಂಧಿಸಿತ್ತು.

ಆರೋಪಿ ರಫೀಕ್ ಇದೀಗ ಮಂಗಳೂರಿನ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನಿಗೆ ಅರ್ಜಿ ಸಲ್ಲಿಸಿದ್ದನು. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಅಪರಾಧದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜ. 20ರಂದು ಆದೇಶಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲರಾದ ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್.ಎನ್. ರಾಜೇಶ್ ಆರೋಪಿಯ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರಾದ ಬಿ.ಬಿ.ಜಕಾತಿರವರು ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ತನಿಖೆ ಸಂಪೂರ್ಣಗೊಳ್ಳುವ ಮೊದಲು ಆರೋಪಿಗೆ ಜಾಮೀನು ನೀಡಿದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆ ಆಗುತ್ತದೆ ಎಂದು ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

.

- Advertisement -

Related news

error: Content is protected !!