



ಪುತ್ತೂರು: ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದ ಸವಾರಿಯಿಂದ ಮೋಟಾರ್ ಸೈಕಲ್ ಅಪಘಾತ ಸಂಭವಿಸಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಹಿರೇಬಂಡಾಡಿ ಸಮೀಪದ ಶಾಖೆಪುರದಲ್ಲಿ ನಡೆದಿದೆ.
ಹಿರೇಬಂಡಾಡಿ ನಿವಾಸಿ ದಯಾನಂದ(49) ಅವರು ನೀಡಿದ ದೂರಿನ ಪ್ರಕಾರ, ದಿನಾಂಕ 22 ರಂದು ಸಂಜೆ, ಪರಿಚಯದ ಲಿಖಿತ್ ರೈ ಅವರು KA-21-EC-7292 ಎಂಬ ನೋಂದಣಿ ಸಂಖ್ಯೆಯ ಮೋಟಾರ್ ಸೈಕಲ್‌ನಲ್ಲಿ ಉಪ್ಪಿನಂಗಡಿ–ಕೊಯಿಲಾ ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಶಾಖೆಪುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಸವಾರಿ ನಡೆಸಿದ ಪರಿಣಾಮ, ಮೋಟಾರ್ ಸೈಕಲ್ ಸವಾರನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡ ಲಿಖಿತ್ ರೈ ಅವರನ್ನು ದೂರುದಾರರು ಹಾಗೂ ಸಾರ್ವಜನಿಕರು ತಕ್ಷಣವೇ ಉಪಚರಿಸಿ, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ 71/2026, ಕಲಂ: 281,125(b) ಬಿಎನ್‌ಎಸ್ ರಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.








