Friday, April 19, 2024
spot_imgspot_img
spot_imgspot_img

ಪುತ್ತೂರು ನಗರಸಭೆ ಅಧ್ಯಕ್ಷರಾಗಿ ಜೀವಂಧರ ಜೈನ್ ಹಾಗೂ ಉಪಾಧ್ಯಕ್ಷರಾಗಿ ವಿದ್ಯಾಗೌರಿ ಆಯ್ಕೆ

- Advertisement -G L Acharya panikkar
- Advertisement -

ಪುತ್ತೂರು (ನ.2) : ನಗರಸಭೆಗೆ ಚುನಾವಣೆ ನಡೆದು ಎರಡು ವರ್ಷಗಳ ಸುದೀರ್ಘ ಅವಧಿಯ ಬಳಿಕ ಇಂದು ಪುತ್ತೂರು ನಗರ ಸಭೆಯ ಅಧ್ಯಕ್ಷ –ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 31 ಸ್ಥಾನಗಳ ಪೈಕಿ 25 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಿರುವ ಬಿಜೆಪಿ ಈ ಎರಡು ಸ್ಥಾನಗಳಿಗೂ ತನ್ನ ಅಭ್ಯರ್ಥಿಗಳನ್ನೂ ಕಣಕ್ಕಿಳಿಸಿತ್ತು.

ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ನಾಲ್ಕು ಬಾರಿ ಗೆದ್ದಿರುವ ಹಿರಿಯ ಸದಸ್ಯ ಜೀವಂಧರ ಜೈನ್ ಅಧ್ಯಕ್ಷ ಸ್ಥಾನಕ್ಕೂ, ಪಕ್ಷದ ಮಹಿಳಾ ತಂಡವನ್ನು ಸಮರ್ಥವಾಗಿ ಮುನ್ನಡೆಸಿದ್ದ, ಪ್ರಭಲ ನಾಯಕಿ ವಿದ್ಯಾಗೌರಿ ಉಪಾಧ್ಯಕ್ಷ ಸ್ಥಾನಕ್ಕೆ ಬೆಳಗ್ಗೆ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭ ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠ0ದೂರು, ನಗರ ಮಂಡಲ ಅಧ್ಯಕ್ಷ ಜಗನ್ನಿವಾಸ ರಾವ್, ಗ್ರಾಮಾಂತರ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಪಕ್ಷದ ಪ್ರಮುಖರು ಹಾಗೂ ನಗರಸಭಾ ಸದಸ್ಯರುಗಳು ಈ ಸಂದರ್ಭ ಉಪಸ್ಥಿತರಿದ್ದರು.

ಚುನಾವಣಾಧಿಕಾರಿಯಾಗಿ ಪುತ್ತೂರು ಉಪವಿಭಾಗಾಧಿಕಾರಿ ಡಾ| ಯತೀಶ್ ಉಳ್ಳಾಲರವರು ಕಾರ್ಯ ನಿರ್ವಹಿಸಿದ್ದು, ಇದೀಗ ಫಲಿತಾಂಶ ಹೊರಬಿದ್ದಿದೆ.

ಕೇವಲ ಐದು ಸ್ಥಾನ ಹೊಂದಿರುವ ಪ್ರಮುಖ ವಿಪಕ್ಷ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾದ್ಯತೆ ಇಲ್ಲ ಎನ್ನಲಾಗುತ್ತಿದ್ದು, ಹಾಗಾಗಿ ಚುನಾವಣೆ ನಡೆಯದೇ ಅವಿರೋಧ ಆಯ್ಕೆಯ ಸಾದ್ಯತೆಯೇ ಅಧಿಕ ಎಂಬ ಸಮೀಕ್ಷೆ ಇತ್ತು.

ಜೀವಂಧರ ಜೈನ್ ಅಧ್ಯಕ್ಷರಾಗಿ ಹಾಗೂ ವಿದ್ಯಾಗೌರಿಯವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪುತ್ತೂರು ಪುರಸಭೆ ಹಾಗೂ ನಗರ ಸಭೆಯ ಇತಿಹಾಸದಲ್ಲಿ ಹೊಸ ಪರಂಪರೆಗೆ ನಾಂದಿ ಹಾಡಿದ ಬಿಜೆಪಿ ತನ್ನ ಪಕ್ಷದ ಪ್ರಭಾಲ್ಯವನ್ನು ಸ್ಪಷ್ಟವಾಗಿ ತೋರ್ಪಡಿಸಿದ್ದು, ಶಾಸಕ ಸಂಜೀವ ಮಠಂದೂರು ಹಾಗೂ ನಗರ ಮಂಡಲದ ಅಧ್ಯಕ್ಷ ಜಗನ್ನಿವಾಸ ರಾವ್ ಅವರ ಸಂಘಟನಾ ಚತುರತೆಗೆ ಹಿಡಿದ ಕೈಕನ್ನಡಿಯಾಗಿ ಪರಿಣಮಿಸಿದೆ.

- Advertisement -

Related news

error: Content is protected !!