- Advertisement -
- Advertisement -





ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಿಶ್ಚಿತ ಎಂದು ಶಾಸಕ ಅಶೋಕ್ ರೈ ಅವರು ಖಚಿತಪಡಿಸಿದ್ದಾರೆ.
ಅ. 27 ರಂದು ಬೆಂಗಳೂರಿನಲ್ಲಿ ಸಿ.ಎಂ ಹಾಗೂ ಡಿ.ಸಿ.ಎಂ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ ಸಂದರ್ಭದಲ್ಲಿ ಶಾಸಕರಿಗೆ ಭರವಸೆ ನೀಡಿದ್ದಾರೆ. ಇವರಿಬ್ಬರ ಆಗಮನದಿಂದ ಕಾರ್ಯಕ್ರಮಕ್ಕೆ ಹೊಸ ಮೆರುಗು ಬಂದಂತಾಗಿದೆ ಎಂದು ಶಾಸಕರು ತಿಳಿಸಸಿದ್ದಾರೆ.
- Advertisement -