Tuesday, July 21, 2026
spot_imgspot_img
spot_imgspot_img

ಪುತ್ತೂರು: 400 ಗ್ರಾಂ ಗಾಂಜಾ ಸಹಿತ ವ್ಯಕ್ತಿ ಬಂಧನ

- Advertisement -
- Advertisement -

ಪುತ್ತೂರು: ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸರು ವ್ಯಕ್ತಿಯೋರ್ವರನ್ನು ಬಂಧಿಸಿದ್ದಾರೆ.


ದಿನಾಂಕ 01-01-2026ರಂದು ಬೆಳಿಗ್ಗೆ, ಪರ್ಲಡ್ಕ ಜಂಕ್ಷನ್ ಪ್ರದೇಶದಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಪಿ.ಎಸ್‌.ಐ ಜನಾರ್ಧನ ಕೆ.ಎಂ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಶಂಕಿತ ವ್ಯಕ್ತಿಯನ್ನು ತಡೆದು ವಿಚಾರಿಸಿದಾಗ ಆತನು ಪುತ್ತೂರು ಕಸಬಾ ಗ್ರಾಮ ನಿವಾಸಿ ಮಹಮ್ಮದ್ ತೌಸೀಫ್ (36) ಎಂದು ಗುರುತಿಸಲಾಗಿದೆ.


ತಪಾಸಣೆ ವೇಳೆ ಆರೋಪಿಯ ಬಳಿ ಸುಮಾರು 400 ಗ್ರಾಂ ನಿಷೇಧಿತ ಗಾಂಜಾ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 02/2026, ಕಲಂ 8(ಸಿ), 20(ಬಿ) ಎನ್‌ಡಿಪಿಎಸ್ ಕಾಯ್ದೆ 1985ರಡಿ ಪ್ರಕರಣ ದಾಖಲಿಸಲಾಗಿದೆ.


ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!