Thursday, October 10, 2024
spot_imgspot_img
spot_imgspot_img

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ವಿರುದ್ದ ಆರೋಪ ಮಾಡಿದ ಮಹಿಳೆಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

- Advertisement -
- Advertisement -

ನ್ಯಾಯಾಲಯದ ತಡೆಯಾಜ್ಞೆ ಬೆನ್ನಲ್ಲೇ ಪುತ್ತಿಲ ಹಾಗೂ ಬೆಂಬಲಿಗರಿಂದ ವಿಶೇಷ ಪ್ರಾರ್ಥನೆ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಎಫ್ ಐ ಆ‌ರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತ ಸೆ.11 ರಂದು ಬೆಳಗ್ಗೆ ಗಂಟೆ 8.30 ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ರುದ್ರಾಭಿಷೇಕ ಸೇವೆ ಮಾಡಿಸಿ ಸಂಕಲ್ಪ ನೆರವೇರಿಸಿ ತೆರಳಿದ್ದಾರೆ.

ಇದೇ ಸಂಧರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖಾ ಪ್ರಕ್ರಿಯೆಗೆ ಸೆ.10ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿದ ಬಳಿಕ ಅರುಣ್ ಕುಮಾರ್ ಪುತ್ತಿಲ ಸೆ.11ರ ಬೆ. 9.12ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೆಂಬಲಿಗರ ಜೊತೆಗೂಡಿ ಅವರು ದೇವರಿಗೆ ಮಲ್ಲಿಗೆ ಸಮರ್ಪಣೆ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಮಾದ್ಯಮದೊಂದಿಗೆ ಮಾತನಾಡಿದ ಪುತ್ತಿಲ ನನ್ನ ವಿರುದ್ಧ ಮಾಡಿದ ಷಡ್ಯಂತ್ರಗಳ ಬಗ್ಗೆ ಪುತ್ತೂರಿನ ಜನತೆಗೆ, ಜಿಲ್ಲೆಗೆ ತಿಳಿದಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಕಾಣದ ಕೈಗಳು ವ್ಯವಸ್ಥಿತವಾದ ಪಿತೂರಿಯಿಂದ ಈ ಕಾರ್ಯವನ್ನು ಮಾಡುತ್ತಾ ರಾಜಕೀಯವಾಗಿ ನನ್ನನ್ನು ಮುಗಿಸುವ ಹುನ್ನಾರ ಮಾಡಿದ್ದಾರೆ. ಆದರೆ ಮಹಾಲಿಂಗೇಶ್ವರ ದೇವರು, ಉಳ್ಳಾಲ್ತಿ ಅಮ್ಮನವರಲ್ಲಿ ನಂಬಿಕೆಯ ಆಧಾರದಲ್ಲಿ ಬದುಕಿದ್ದೇನೆ, ಯಾವತ್ತೂ ಕೂಡ ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ನನ್ನ ಜೊತೆಗಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಶ್ರೀ ಕೃಷ್ಣ ಉಪಾಧ್ಯಾಯ ಮತ್ತು ಬೆಂಬಲಿಗರು ಉಪಸ್ಥಿತರಿದ್ದರು.

- Advertisement -

Related news

error: Content is protected !!