Friday, June 27, 2025
spot_imgspot_img
spot_imgspot_img

ಪುತ್ತೂರು: ಮನೆಯೊಂದರಲ್ಲಿ ಸ್ಪೋಟಗೊಂಡ ರೆಫ್ರಿಜರೇಟರ್; ತಪ್ಪಿದ ಅನಾಹುತ..!

- Advertisement -
- Advertisement -

ಪುತ್ತೂರು: ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡು ಅಗ್ನಿ ಅವಘಡ ಸಂಭವಿಸಿದ ಘಟನೆ ಪುತ್ತೂರು ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪ ನಡೆದಿದೆ.

ಜಿಡೆಕಲ್ಲು ಕಾಲೇಜು ಬಳಿಯ ಮೋನಪ್ಪ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ.

ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ದುರಂತ ಸಂಭವಿಸಿದೆ. ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ. ಆದರೆ ಅವಘಡದಲ್ಲಿ ಮನೆಗೆ ಹಾನಿಯುಂಟಾಗಿದೆ.

ಇನ್ನು ಹತ್ತಿರದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Related news

error: Content is protected !!