- Advertisement -
- Advertisement -

ಪುತ್ತೂರು: ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ಮತ್ತು ಕುರಿಯ ಗ್ರಾಮದ ಅಮ್ಮುಂಜೆ ನಿವಾಸಿ ನಾರಾಯಣ ನಾಯ್ಕ ಅವರು ಹೃದಯಾಘಾತದಿಂದ ನಿನ್ನೆ ರಾತ್ರಿ ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನಾರಾಯಣ ನಾಯ್ಕ (48) ಅವರು ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಕಳೆದ ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ವರದಿಗಾರರಾಗಿ ಚಿರಪರಿಚಿತರಾಗಿದ್ದ ನಾರಾಯಣ ನಾಯ್ಕ ಸರಳ, ಸಜ್ಜನಿಕೆಯ ಸ್ನೇಹ ಜೀವಿಯಾಗಿದ್ದರು. ಮರಾಠಿ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು.

- Advertisement -