- Advertisement -
- Advertisement -



ಪುತ್ತೂರು: ಕಾಳುಮೆಣಸನ್ನು ಕೊಯ್ಯಲು ಹೋಗಿ ಮರದಿಂದ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ.
ಗುಮ್ಮಟೆಗದ್ದೆ ನಿವಾಸಿ ನಾರಾಯಣ ನಾಯ್ಕ ಪೈಂತಿಮುಗೇರು ಮೃತಪಟ್ಟವರು. ತನ್ನ ಮನೆ ಮುಂಭಾಗದಲ್ಲಿದ್ದ ತೆಂಗಿನ ಮರದಲ್ಲಿ ಬೆಳೆದಿದ್ದ ಕಾಳು ಮೆಣಸನ್ನು ಅಲ್ಯೂಮಿನಿಯಂ ಏಣಿ ಏರಿ ಕೊಯ್ಯುತ್ತಿದ್ದಾಗ ಏಣಿ ಸಹಿತ ಅವರು ಮರದಿಂದ ಜಾರಿ ಬಿದ್ದಿದ್ದು, ಘಟನೆಯಿಂದ ನಾರಾಯಣ ನಾಯ್ಕರವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
- Advertisement -








