Wednesday, May 15, 2024
spot_imgspot_img
spot_imgspot_img

ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರಿಂದ ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ. ಸುಮಾರು ರೂ 4,15,925/- ಮೌಲ್ಯದ ಸೊತ್ತು ವಶಕ್ಕೆ

- Advertisement -G L Acharya panikkar
- Advertisement -

ಪುತ್ತೂರು: ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ್ ಕುಮಾರ್ ರೈ ಎಂಬವರಿಗೆ ಸೇರಿದ ಹಳೇ ಮನೆಯ ಕೊಟ್ಟಿಗೆಯ ಅಟ್ಟದಲ್ಲಿ ಎನ್ ಕೆ ಆರ್ ಎಂದು ಮಾರ್ಕ್ ಮಾಡಿ ಇಟ್ಟಿದ್ದ ಸುಮಾರು 23 ಗೋಣಿ ಸುಲಿಯದ ಅಡಿಕೆಯನ್ನು ಕಳವು ಮಾಡಲಾಗಿದ್ದು, ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಡಿಕೆ ಕಳ್ಳತನ ಮಾಡಿದ 4 ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 4,15,925/- ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಬಡಗನ್ನೂರು ಗ್ರಮದ ಕೊಯಿಲಾ ಶ್ರವಣ್ ಕೆ(20), ಬಾಣಪದವು ಜಯಚಂದ್ರ (21), ನಿಡ್ಪಳ್ಳಿ ಡೊಬ್ಬಟ್ಟಗಿರಿಯ ಅಶೋಕ (24), ನಿಡ್ಡಳ್ಳಿ ಕಲ್ಲಮೂಲೆಯ ಪುನೀತ್ (20) ಎಂದು ಗುರುತಿಸಲಾಗಿದೆ. ಬಂಧಿತರಿಂದ 1,55,925/- ರೂ. ಮೌಲ್ಯದ ಅಡಿಕೆ ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು, ಮತ್ತು ಆಟೋ ರಿಕ್ಷಾ ಸೇರಿದಂತೆ ಒಟ್ಟು 4,15,925/- ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಬೇಧಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್ ರವರ ಮಾರ್ಗದರ್ಶನದಲ್ಲಿ , ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ರವಿ.ಬಿ.ಎಸ್, ರವರ ಆದೇಶದಂತೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಧನಂಜಯ ಬಿ.ಸಿ ರವರ ನೇತೃತ್ವದಲ್ಲಿ ಎಎಸ್ಐ ಮುರುಗೇಶ್, ಸಿಬ್ಬಂದಿಗಳಾದ ಬಾಲಕೃಷ್ಣ, ಅದ್ರಾಮ, ಪ್ರವೀಣ್ ರೈ, ಹರೀಶ್ ಗೌಡ, ದಯಾನಂದ, ಸುಂದರ್, ವೆಂಕಪ್ಪ, ಸಲೀಂ, ನಾಗೇಶ್ ಕೆ ಸಿ, ಮುನಿಯ ನಾಯ್ಕ, ಕಾರ್ತಿಕ್, ಯುವರಾಜ ನಾಯ್ಕ, ಚಾಲಕರಾದ ಯೋಗೀಶ್ ರವರು ಭಾಗವಹಿಸಿರುತ್ತಾರೆ.

- Advertisement -

Related news

error: Content is protected !!