Friday, April 26, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ

- Advertisement -G L Acharya panikkar
- Advertisement -

ಪುತ್ತೂರು: ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರ ಸಂಘದ ನೂತನ ವಿಸ್ತೃತ ಆಡಳಿತ ಕಚೇರಿ ಮತ್ತು ಸಭಾಭವನದ ಉದ್ಘಾಟನೆಯು ಇಂದು ಪುತ್ತೂರು ಮಾಧುರಿ ಸೌಧದಲ್ಲಿ ನಡೆಯಿತು.

ನೂತನ ವಿಸ್ತೃತ ಆಡಳಿತ ಕಚೇರಿಯನ್ನು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸಿದರು. ನಾಮ ಫಲಕ ಅನಾವರಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಡಿದರು. ಶಾಸಕ ಸಂಜೀವ ಮಠಂದೂರು ಅವರು ಕಂಪ್ಯೂಟರ್ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಸಭಾಂಗಣವನ್ನು ಉದ್ಘಾಟಿಸಿದರು.

ಭದ್ರತಾ ಕೊಠಡಿಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಅವರು ವೆಬ್‌ಸೈಟ್‌ಗೆ ಚಾಲನೆ ನೀಡಿದರು. ವಿಸ್ತೃತ ಮಳಿಗೆಯನ್ನು ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಕಾಶ್ ರಾವ್ ಉದ್ಘಾಟಿಸಿದರು.

ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ರಾಜ್ಯ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಜೇನು ವ್ಯವಸಾಯಗಾರರ ಸಹಕಾರಿ ಸಂಘದ ವ್ಯವಸ್ಥಾಪಕ ನಿರ್ದೇಶಕ ತಿಮ್ಮಯ್ಯ ಪಿ, ಹಾಗೂ ನಿರ್ದೇಶಕರುಗಳು, ವಿವಿಧ ಗಣ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!