Sunday, May 5, 2024
spot_imgspot_img
spot_imgspot_img

ಪುತ್ತೂರು : ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

- Advertisement -G L Acharya panikkar
- Advertisement -

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆ ದರ್ಬೆ, ಫಿಲೋನಗರ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶುಭಾರಂಭವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಆರಂಭದಲ್ಲಿ ಎಂಟನೆಯ ಮತ್ತು ಒಂಭತ್ತನೆಯ ತರಗತಿಗಳಿಗೆ ಹೊಸದಾಗಿ ದಾಖಲಾತಿಯನ್ನು ಹೊಂದಿದ 228 ವಿದ್ಯಾರ್ಥಿ – ವಿದ್ಯಾರ್ಥಿನಿಯರನ್ನು ಹೂಕೊಟ್ಟು ವಾದ್ಯವೃಂದದೊಂದಿಗೆ ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಕಾರ್ಮಿನ್ ಪಾಯಸ್ ಇವರ ಸಮ್ಮುಖದಲ್ಲಿ ನೆರವೇರಿಸಲಾಯಿತು.

ವೇದಿಕೆಯಲ್ಲಿ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫಾ| ಲಾರೆನ್ಸ್ ಮಸ್ಕರೇನ್ಹಸ್, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಮೌರಿಸ್ ಕುಟಿನ್ಹಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗನ್ನಿವಾಸ್ ರಾವ್ ಹಾಗೂ ಚರ್ಚ್ ಪಾಲನಾ ಸಮತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ ಕೋಸ್ಟಾ ಇವರು ಉಪಸ್ಥಿತರಿದ್ದರು. ಶಾಲಾ ಪ್ರಾರಂಭೋತ್ಸವದ ಅಧ್ಯಕ್ಷತೆಯನ್ನು ಸಂಚಾಲಕ ಫಾ| ಲಾರೆನ್ಸ್ ಮಸ್ಕರೇನ್ಹಸ್ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಎಲ್ಲಾ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಈ ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು.

ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಂದ ಪ್ರಾರ್ಥನಾ ವಿಧಿ ಕಾರ್ಯಕ್ರಮ ನೆರವೇರಿತು. ನಂತರ ಶಾಲಾ ಮುಖ್ಯೋಪಾಧ್ಯಾಯಿನಿ ಕಾರ್ಮಿನ್ ಪಾಯಸ್ ಇವರು ಪ್ರಸ್ತುತ ಶೈಕ್ಷಣಿಕ ವರ್ಷದ ಧ್ಯೇಯ ವಾಕ್ಯವಾದ ಗುಣಾತ್ಮಕ ಶಿಕ್ಷಣ ಹಾಗೂ ರಚನಾತ್ಮಕ ಚಟುವಟಿಕೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ತದನಂತರ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮವನ್ನು ಪೂಜ್ಯ ಸಂಚಾಲಕರು ನೆರವೇರಿಸಿದರು. ಕಳೆದ ವರ್ಷ ವಿಶೇಷ ಸಾಧನೆಗೈದ ಹತ್ತನೇ ತರಗತಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾಲಾ ಶಿಕ್ಷಕಿ ರೇಶ್ಮಾ ರೆಬೆಲ್ಲೊ ಇವರು ವಂದನಾರ್ಪಣೆ ಕಾರ್ಯಕ್ರಮ ನೆರವೇರಿಸಿದರು. ನಂತರ ಎಲ್ಲಾ ವಿದ್ಯಾರ್ಥಿಗಳಿಗೂ ಸಿಹಿ ವಿತರಿಸಲಾಯಿತು. ಕಾರ್ಯಕ್ರಮವನ್ನು ಕುಮಾರಿ ಭೂಮಿಕಾ ಮತ್ತು ಮಾಸ್ಟರ್ ಸಿದ್ದಾಂತ್ ಇವರು ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.

- Advertisement -

Related news

error: Content is protected !!