Friday, April 26, 2024
spot_imgspot_img
spot_imgspot_img

ಪುತ್ತೂರು : ಕರ್ತವ್ಯ ನಿರತ ಮಹಿಳಾ ಎಸ್ ಐ ಮೇಲೆ ಹಲ್ಲೆ – ಸಹೋದರಿಯರಿಬ್ಬರ ಬಂಧನ

- Advertisement -G L Acharya panikkar
- Advertisement -

ಪುತ್ತೂರು: ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ಮಹಿಳಾ ಎಸ್ ಐ ಮೇಲೆ ದೂರುದಾರ ಮಹಿಳೆ ಮತ್ತು ಆಕೆಯ ಅಕ್ಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಹೋದರಿಯರಿಬ್ಬರನ್ನು ಬಂಧಿಸಿದ ಘಟನೆ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳಾ ಪೊಲೀಸ್ ಠಾಣೆಯ ಎಸ್.ಐ ಸೇಸಮ್ಮ ಅವರು ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ(34ವ) ಮತ್ತು ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ(35ವ) ಬಂಧಿತ ಆರೋಪಿಗಳು. ಸುನಿತಾ ಡಿ ಸೋಜಾ ಎಂಬವರು ತನ್ನ ಸಂಬಂಧಿ ಬೇಬಿ ಡಿಸೋಜಾ ಎಂಬವರ ವಿರುದ್ದ ಹಾಗೂ ಬೇಬಿ ಡಿಸೋಜಾ ಅವರು ಸುನಿತಾ ಡಿಸೋಜಾ ಅವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಫೆ.28ರಂದು ಪ್ರತ್ಯೇಕ ದೂರು ದಾಖಲಿಸಿದ್ದರು.

ಈ ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ಸಂದರ್ಭ ಬೇಬಿ ಡಿಸೋಜ ಅವರ ಅಕ್ಕ, ಹಾಸನದಲ್ಲಿರುವ ಆಶಾ ಕೂಡಾ ಜೊತೆಗೆ ಬಂದಿದ್ದರು. ವಿಚಾರಣೆಯ ಒಂದು ಹಂತದಲ್ಲಿ ಬೇಬಿ ಡಿಸೋಜಾರವರು ತನ್ನ ಪತಿ ಲಾರೆನ್ಸ್ ಡಿ.ಸೋಜಾ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದರು ಎನ್ನಲಾಗಿದೆ.

ಎಸ್.ಐ ಸೇಸಮ್ಮ ಹಲ್ಲೆಯನ್ನು ತಡೆಯಲು ಯತ್ನಿಸಿದಾಗ ಬೇಬಿ ಡಿಸೋಜ ಮತ್ತು ಆಕೆಯ ಅಕ್ಕ ಆಶಾ ರವರು ಕರ್ತವ್ಯದಲ್ಲಿ ಎಸ್.ಐ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಬಳಿಕ ಹಲ್ಲೆಗೆ ಒಳಗಾಗಿದ್ದಾರೆ ಎನ್ನಲಾದ ಎಸ್.ಐ ಸೇಸಮ್ಮ ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಹಲ್ಲೆ ನಡೆದಿರುವ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಹಾಗೂ ಹಲ್ಲೆ ನಡೆಸಿದ ಆರೋಪಿಗಳಾದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!