Sunday, June 29, 2025
spot_imgspot_img
spot_imgspot_img

ಪುತ್ತೂರು: ವಿದ್ಯಾರ್ಥಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್‌‌..!

- Advertisement -
- Advertisement -

ಪುತ್ತೂರು: ಪುತ್ತೂರು ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಕಲಬುರಗಿ ಮೂಲದ ಕಾರ್ತಿಕ್ ಎಂದು ತಿಳಿದು ಬಂದಿದೆ.

ಪುತ್ತೂರಿನ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದು, ನ. 16ರಿಂದ ಆಕೆ ಪಿ.ಜಿ.ಯಿಂದ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರ್ಥಿನಿಯ ತಾಯಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ವಿದ್ಯಾರ್ಥಿನಿಯನ್ನು ಕಲಬುರಗಿಯ ಕಾರ್ತಿಕ್ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆಯ ಪೊಲೀಸರು ನ.17 ರಂದು ಆರೋಪಿ ಕಾರ್ತಿಕ್‌ನನ್ನು ಗುಲ್ಬರ್ಗದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Related news

error: Content is protected !!