Friday, May 3, 2024
spot_imgspot_img
spot_imgspot_img

ಪುತ್ತೂರು : ನಗರಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ

- Advertisement -G L Acharya panikkar
- Advertisement -

ಪುತ್ತಿಲ ಪರಿವಾರದ ಪ್ರಮುಖರಾದ ಡಾ. ಸುರೇಶ್ ಪುತ್ತೂರಾಯ ಸಹಿತ ಪ್ರಮುಖರು ಭಾಗಿ

ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಈಗಾಗಲೇ ಘೋಷಣೆಯಾಗಿದ್ದು, ಇಂದು ನಾಮಪತ್ರ ಸಲ್ಲಿಕೆ ನಡೆಯಿತು.

ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಪೈಕಿ ಬಿಜೆಪಿಯಿಂದ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ಹಾಗೂ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಜಿಲ್ಲಾಧಿಕಾರಿಗಳ ಅಧಿಸೂಚನೆಯ ಮೇರೆಗೆ ಡಿ 8 ರಂದು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಇಂದು ಡಿ. 15 ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಇಂದು ನಾಮ ಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳು ಹಾಗೂ ಪಕ್ಷದ ಪ್ರಮುಖರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಡಾ. ಸುರೇಶ್ ಪುತ್ತೂರಾಯ ರವರು ಅಭ್ಯರ್ಥಿಗಳಿಗೆ ಹಾರ ಹಾಕಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಜೀವಂಧರ್ ಜೈನ್ ಸಹಿತ ಹಲವು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

- Advertisement -

Related news

error: Content is protected !!