Sunday, May 5, 2024
spot_imgspot_img
spot_imgspot_img

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

- Advertisement -G L Acharya panikkar
- Advertisement -

ಪುತ್ತೂರು : ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಮೇರ್ಲ ಎಂಬಲ್ಲಿ ಪತ್ತೆಯಾಗಿದೆ.

ಆರ್ಯಾಪು ಗ್ರಾಮದ ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ(46) ಮೃತ ವ್ಯಕ್ತಿ. ಅವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕಾಶ್‌ ಅವರು ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಮನೆ ಮಂದಿ ಬೇರೆಡೆಗೆ ತೆರಳಿದ್ದ ಸಂದರ್ಭದಲ್ಲಿ ಅವರು ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮನೆಮಂದಿ ಮರಳಿ ಮನೆಗೆ ಬಂದ ವೇಳೆ ಈ ಘಟನೆ ಅವರ ಅರಿವಿಗೆ ಬಂದಿದೆ. ಎರಡು ದಿನಗಳ ಹಿಂದೆಯೇ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಸಂಪ್ಯ ಪೊಲೀಸ್ ಠಾಣೆಗೆ ಈ ಕುರಿತು ಮಾಹಿತಿ ನೀಡಲಾಗಿದೆ.

- Advertisement -

Related news

error: Content is protected !!