Sunday, June 7, 2026
spot_imgspot_img
spot_imgspot_img

ಪುತ್ತೂರು: ಶಿಕ್ಷಕ ಸೇರಾ ಕೋಟ್ಯಪ್ಪ ಪೂಜಾರಿ ನಿಧನ..!

- Advertisement -
- Advertisement -

ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಮೂಲತಃ ಮಾಣಿಯವರಾದ ಅವರು, ಬೊಳುವಾರಿನಲ್ಲಿ ವಾಸವಾಗಿದ್ದರು. ಕಳೆದ ಕೆಲ ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಗುಣಮುಖರಾಗಿದ್ದು, ಆರೋಗ್ಯವಾಗಿದ್ದರು.

ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದ ಅವರು, ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಬಳಿಕ ಪ್ರತಿದಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತಿದ್ದರು. ಸೋಮವಾರ ಬೆಳಗ್ಗೆ ಬೊಳುವಾರಿನ ಅವರ ರೂಂನಲ್ಲಿ ನಿಧನರಾದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!