Sunday, June 29, 2025
spot_imgspot_img
spot_imgspot_img

ಪುತ್ತೂರು: ವಿಶ್ವ ಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 13ನೇ ವರ್ಷದ ಪುತ್ತೂರು ಮೊಸರುಕುಡಿಕೆ ಮತ್ತು ಶೋಭಾಯಾತ್ರೆ ಉತ್ಸವ

- Advertisement -
- Advertisement -

ಪುತ್ತೂರು: ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಪುತ್ತೂರು ದ.ಕ, ವಿಶ್ವ ಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 13ನೇ ವರ್ಷದ ಪುತ್ತೂರು ಮೊಸರುಕುಡಿಕೆ ಮತ್ತು ಶೋಭಾಯಾತ್ರೆ ಉತ್ಸವವು ಸೆ.9 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಸೆ.9 ರಂದು ಬೆಳಿಗ್ಗೆ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ 2.30 ರಿಂದ ಶ್ರೀ ಆಂಜನೇಯ ಮಂತ್ರಾಲಯ ಬೊಳುವಾರು ಪುತ್ತೂರು ಇಲ್ಲಿ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ. ಪುತ್ತೂರು ಖ್ಯಾತ ವೈದ್ಯ ಡಾ.ಎಂ.ಕೆ ಪ್ರಸಾದ್ ಶೋಭಾಯಾತ್ರೆಯನ್ನು ಉದ್ಘಾಟಿಸಲಿದ್ದಾರೆ. ಬಜರಂಗದಳ ಮಂಗಳೂರು ವಿಭಾಗದ ಸಹ ಸಂಯೋಜಕ ಪುನಿತ್ ಅತ್ತಾವರ ಧ್ವಜ ಹಸ್ತಾಂತರ ಮಾಡಲಿದ್ದಾರೆ.

ಸಂಜೆ ಗಂಟೆ 6.30 ರಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಸಭೆಯಲ್ಲಿ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಕಿಶೋರ್‍ ಕುಮಾರ್‍ ಬೊಟ್ಯಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿ.ಹಿಂ.ಪ ಕರ್ನಾಟಕ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿ.ಹಿಂ.ಪ ಪುತ್ತೂರು ಜಿಲ್ಲೆ ಕಾರ್ಯದರ್ಶಿ ನವೀನ್ ನೆರಿಯ, ನ್ಯಾಯವಾದಿ ಅರುಣ್ ಶ್ಯಾಮ್, ನೂತನ ಪ್ರವೀಣ್ ನೆಟ್ಟಾರು ಭಾಗವಹಿಸಲಿದ್ದಾರೆ.

ವೀರ ಹಿಂದೂ ಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಲಿದೆ.

- Advertisement -

Related news

error: Content is protected !!