Friday, June 5, 2026
spot_imgspot_img
spot_imgspot_img

ಪುತ್ತೂರು: ನಿಡ್ಪಳ್ಳಿಯ ಶ್ರೀ ಶಾಂತದುರ್ಗ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ

- Advertisement -
- Advertisement -

ಪುತ್ತೂರು: ನಿಡ್ಪಳ್ಳಿಯ ಶ್ರೀ ಶಾಂತದುರ್ಗ ದೇವಸ್ಥಾನದಲ್ಲಿ ಕೆಲವು ದಿನಗಳ ಹಿಂದೆ ಕಳ್ಳತನ ನಡೆದಿದ್ದು, ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಸಂಪ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಇದೀಗ ಸಂಪ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸೆ.12ರಂದು ರಾತ್ರಿ ಪೂಜೆಯ ಬಳಿಕ ಅರ್ಚಕರು ದೇವಸ್ಥಾನಕ್ಕೆ ಬೀಗ ಹಾಕಿ ಹೋಗಿದ್ದು, ಮರುದಿನ ಬೆಳಿಗ್ಗೆ ದೇವಸ್ಥಾನಕ್ಕೆ ಬಂದಾಗ ಎರಡೂ ಕಾಣಿಕೆ ಹುಂಡಿಗಳ ಬೀಗ ಮುರಿದಿರುವುದು ಕಂಡು ಬಂದಿದೆ. ಕೂಡಲೇ ಅರ್ಚಕರು ವ್ಯ ವಸ್ಥಾಪನಾ ಸಮಿತಿಯ ಅಧ್ಯಕ್ಷರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅವರು ಸ್ಥಳಕ್ಕೆ ಬಂದು ನೋಡಿದಾಗ ಕಳ್ಳರು ಹುಂಡಿಗಳ ಬೀಗವನ್ನು ಮುರಿದು ಅಂದಾಜು 43,000 ರೂ. ಹಣವನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಪುತ್ತೂರು ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದ್ದು, ಪೊಲೀಸರಿಗೆ ಭಾರೀ ತಲೆನೋವು ಉಂಟಾಗಿದೆ.

- Advertisement -

Related news

error: Content is protected !!