


ಪುತ್ತೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣ, ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದ ‘ಧರ್ಮ ಚಾವಡಿ’ ತುಳು ಚಿತ್ರ ಜು.11ರಂದು ಕರಾವಳಿಯ ಎಲ್ಲ ಚಿತ್ರ ಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ.
ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದಲ್ಲಿ ಜಗದೀಶ್ ಅಮೀನ್ ನಡುಬೈಲು ಚಿತ್ರ ನಿರ್ಮಾಣ ಮಾಡಿದ್ದು, ಪ್ರಸಾದ್ ಕೆ.ಶೆಟ್ಟಿ ಸಂಗೀತ ನೀಡಿದ್ದಾರೆ. ಶ್ರೀನಾಥ್ ಪವಾರ್ ಸಂಕಲನ, ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು, ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ.
ರಮೇಶ್ ರೈ ಕುಕ್ಕುವಳ್ಳಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ರವಿ ಸ್ನೇಹಿತ್, ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮನಗರ ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ, ರಂಜನ್ ಬೋಳೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು, ರೂಪಾ ಡಿ.ಶೆಟ್ಟಿ, ಸವಿತಾ ಅಂಚನ್, ಧನ್ಯಾ ಪೂಜಾರಿ, ನೇಹಾ ಕೋಟ್ಯಾನ್, ನಿಶ್ಮಿತಾ ಶೆಟ್ಟಿ ಸೇರಿದಂತೆ ಅನೇಕ ಕಾರಾವಳಿಯ ಕಲಾವಿದರು ಅಭಿನಯಿಸಿದ್ದಾರೆ.

ಈ ಹಿಂದೆ ಬಿಡುಗಡೆಗೊಂಡು ತುಳುನಾಡು ಸೇರಿದಂತೆ ದೇಶ ವಿದೇಶದಲ್ಲಿ ಸಿನಿ ಪ್ರಿಯರ ಮೆಚ್ಚುಗೆಗೆ ಪಾತ್ರವಾದ ‘ಧರ್ಮ ದೈವ’ ಸಿನಿಮಾ ದ ನಿರ್ದೇಶಕರು ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದಲ್ಲಿ ವಿಭಿನ್ನ ರೀತಿಯಲ್ಲಿ ಧರ್ಮ ಚಾವಡಿ ಚಿತ್ರ ಮೂಡಿ ಬಂದಿದೆ. ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು ಮುಂಬೈಯಲ್ಲಿ ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಹೊಸ ನಿರೀಕ್ಷೆ ಹುಟ್ಟು ಹಾಕಿದೆ. ಸಾಕಷ್ಟು ಜನರು ಇದು ‘ಧರ್ಮ ದೈವ’ದ ಮುಂದುವರಿದ ಭಾಗ ಎಂದು ಭಾವಿಸಿದ್ದರು. ಆದರೆ ಟೀಸರ್ ಬೇರೆಯೇ ರೀತಿಯಲ್ಲಿದ್ದು ಬಹಳಷ್ಟು ಕುತೂಹಲ ಹುಟ್ಟಿ ಹಾಕಿದೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.