- Advertisement -
- Advertisement -
ಪುತ್ತೂರು: ವಿದ್ಯುತ್ ಶಾಕ್‌ನಿಂದ ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಬೇಂಗತ್ತಡ್ಕದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ದೇವಪ್ಪ ನಾಯ್ಕ ಅವರ ಪತ್ನಿ ಭಾಗೀರಥಿ (59) ಎಂಂದು ಗುರುತಿಸಲಾಗಿದೆ.
ಮಧ್ಯಾಹ್ನ ವೇಳೆ ಮನೆಯ ಟೇರಸ್ ಮೇಲೆ ತೆರಳಿದ್ದ ಸಂದರ್ಭದಲ್ಲಿ ಪಂಪ್‌ಗೆ ಅಳವಡಿಸಿದ್ದ ವಯರ್ ಮೇಲೆ ಕಾಲಿಟ್ಟಿದ್ದಾರೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು ಘಟನೆಗೆ ಕಾರಣ ಎನ್ನಲಾಗಿದೆ. ಮೃತರು ಪತಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
- Advertisement -