- Advertisement -
- Advertisement -
ಪುತ್ತೂರು: ಅನಾರೋಗ್ಯದಿಂದ ಯುವ ವಕೀಲರೊಬ್ಬರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್‌ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗೂ ಉತ್ತಮ ಕ್ರೀಡಾಪಟುವಾಗಿದ್ದರು.
ಅನಾರೋಗ್ಯದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಮತ್ತು ಮಗುವನ್ನು ಕುಟುಂಬಸ್ಥರನ್ನು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.
- Advertisement -