Monday, June 8, 2026
spot_imgspot_img
spot_imgspot_img

ಪುತ್ತೂರು: ಅನಾರೋಗ್ಯದಿಂದ ಯುವತಿ ಸಾವು..!

- Advertisement -
- Advertisement -

ಪುತ್ತೂರು: ಅನಾರೋಗ್ಯದಿಂದ ಯುವತಿಯೋರ್ವರು ನಿಧನರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತಪಟ್ಟ ಯುವತಿಯನ್ನು ಶಿಶಿಲ ಗ್ರಾಮದ ಪೆರಿಕೆ ನಿವಾಸಿ ಸುಪ್ರೀತಾ (16) ಎಂದು ಗುರುತಿಸಲಾಗಿದೆ.

ಕೃಷ್ಣಪ್ಪ ಮಲೆಕುಡಿಯ ಹಾಗೂ ಸುನಂದಾ ದಂಪತಿಯ ಪುತ್ರಿ ಸುಪ್ರೀತಾ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

ಮಂಗಳವಾರ ಆಕೆಯ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ತಕ್ಷಣವೇ ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮನೆಗೆ ಹಿಂದಿರುಗುವ ಮಾರ್ಗಮಧ್ಯೆ ಆಕೆ ಪ್ರಜ್ಞೆ ಕಳೆದುಕೊಂಡಿದ್ದಳು. ಮತ್ತೆ ಆಸ್ಪತ್ರೆಗೆ ತಲುಪಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದರು. ಸುಪ್ರೀತಾ ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

- Advertisement -

Related news

error: Content is protected !!