Monday, May 6, 2024
spot_imgspot_img
spot_imgspot_img

ಪುತ್ತೂರು: ಪತ್ರಕರ್ತ ಶ್ಯಾಮ ಸುದರ್ಶನ್ ಹೊಸಮೂಲೆ ಅವರಿಗೆ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

- Advertisement -G L Acharya panikkar
- Advertisement -
vtv vitla
vtv vitla
vtv vitla

ಪುತ್ತೂರು: ಕೇರಳದ ಸಮಗ್ರ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡನ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪುತ್ತೂರು ಕಹಳೆ ನ್ಯೂಸ್ ಕೇಬಲ್ ನೆಟ್‌ವರ್ಕ್‌ನ ಪ್ರಧಾನ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ ಅವರಿಗೆ ಪ್ರದಾನ ಮಾಡಿದೆ.

ಗಡಿ ನಾಡ ಕನ್ನಡದ ಕುರಿತ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪತ್ರಿಕೋದ್ಯಮ ವಿಭಾಗದಲ್ಲಿ ಶ್ಯಾಮ ಸುದರ್ಶನ್ ಹೊಸಮೂಲೆಯವರಿಗೆ ಪ್ರದಾನ ಮಾಡಲಾಗಿದ್ದು, ಡಿ.5ರಂದು ಕಾಸರಗೋಡು ಹೊಸ ಬಸ್ ನಿಲ್ದಾಣದ ಬಳಿಯ ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ‘ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

vtv vitla

ಎಡನೀರು ಮಠದ ಸಚ್ಚಿದಾನಂದಭಾರತೀ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡಿ, ಆಶೀರ್ವಚನ ನೀಡಿದರು. ಕರ್ನಾಟಕ ಸರಕಾರದ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆಯವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಕೆ. ಗಿರೀಶ್ ಉಪ್ಪಾರ, ಕಾಸರಗೋಡು ಶಾಸಕ ಎನ್‌.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಅಶ್ರಫ್ ಮುಖ್ಯ ಅಭ್ಯಾಗತರಾಗಿದ್ದರು. ಕೇರಳದ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಎಸ್.ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಚನಿಯಪ್ಪ ನಾಯ್ಕ ಎನ್, ಅಖಿಲೇಶ್ ನಗುಮುಗಂ, ಎ.ಆರ್. ಸುಬ್ಬಯ್ಯಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!