Monday, May 6, 2024
spot_imgspot_img
spot_imgspot_img

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್‌ ಕುಮಾರ್‌ ಪುತ್ತಿಲ ಸ್ಪರ್ಧೆ ..!

- Advertisement -G L Acharya panikkar
- Advertisement -
vtv vitla

ಪುತ್ತೂರಿನ ಹಿಂದೂ ಕಾರ್ಯಕರ್ತರು ಇದೀಗ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯ ಆಯ್ಕೆಯ ವಿಷಯವಾಗಿ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಅಸಮಾಧಾನಗೊಂಡಿದ್ದು, ಪುತ್ತೂರು ಬಿಜೆಪಿ ಪಾಳಯದಲ್ಲಿ ಅಸಮಾಧಾನದ ಹೊಗೆಯಾಡಲಾರಂಭಿಸಿದೆ.

ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆಯಾಗಿದ್ದೇ ತಡ ಕರಾವಳಿಯಲ್ಲಿ ಭಿನ್ನ ಮತ ಸ್ಫೋಟಗೊಂಡಿದೆ.

ಪುತ್ತೂರಿನಲ್ಲಿ ಅರುಣ್ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವ ನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರ ಪರವಾಗಿ ಕಾರ್ಯ ನಿರ್ವಹಿಸಲು ಸಾವಿರಾರು ಕಾರ್ಯಕರ್ತರು ಉತ್ಸುಕರಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಪುತ್ತೂರಿನ ಕೊಟೆಚಾ ಹಾಲ್‌ನಲ್ಲಿ ನಡೆದ ಅರುಣ್‌ ಕುಮಾರ್‌ ಪುತ್ತಿಲ ಅಭಿಮಾನಿಗಳ ಸಭೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿ ಪುತ್ತಿಲರವರು ಪಕ್ಷೇತರವಾಗಿ ಸ್ಪರ್ಧಿಸಬೇಕೆಂದು ಒತ್ತಾಯಿಸಿದರು. ಪುತ್ತಿಲರವರು ತಮ್ಮ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಎರಡು ದಿನದಲ್ಲಿ ತಮ್ಮ ಸ್ಪಷ್ಟ ನಿಲುವುವನ್ನು ತಿಳಿಸುತ್ತೇನೆ ಎಂದಿದ್ದರು. ಇದೀಗ ಪುತ್ತಿಲರವರು ಪುತ್ತೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

- Advertisement -

Related news

error: Content is protected !!