Sunday, June 29, 2025
spot_imgspot_img
spot_imgspot_img

ಪುತ್ತೂರು: ಕೋಳಿ ಅಂಕಕ್ಕೆ ಪೊಲೀಸ್ ರೈಡ್; ಕೃತ್ಯಕ್ಕೆ ಬಳಸಿದ 10 ಕೋಳಿ,ರಿಕ್ಷಾ ಹಾಗೂ ಐವರು ವಶಕ್ಕೆ!

- Advertisement -
- Advertisement -
driving

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲದ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ ಘಟನೆ ಸೆ.3ರಂದು ನಡೆದಿದೆ.

ಬಂಧಿತ ಆರೋಪಿಗಳು ಕುಶಾಲಪ್ಪಗೌಡ, ಪ್ರಶಾಂತ್ ಕುಮಾರ್, ಬಾಬು ಆಜಿಲ, ಸುರೇಶ್ ರೈ, ಚೆನ್ನಪ್ಪ ಗೌಡ ಎನ್ನಲಾಗಿದೆ.

ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಮಾಹಿತಿಯನ್ನು ಆಧರಿಸಿ ಪೊಲೀಸರು ಐವರನ್ನು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ ಜೂಜಾಟಕ್ಕೆ ಬಳಸಿದ್ದ 10 ಕೋಳಿಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಒಂದು ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ.52,200 ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!