Friday, June 5, 2026
spot_imgspot_img
spot_imgspot_img

ಪುತ್ತೂರು: ಲಾರಿ ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ; ಬೆಳ್ಳಾರೆಯ ಉದ್ಯಮಿ ಮೃತ್ಯು!

- Advertisement -
- Advertisement -

ಪುತ್ತೂರು: ಇಂದು ಬೆಳಗ್ಗಿನ ಜಾವ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ, ಸ್ಕೂಟರ್ ಸವಾರ ಬೆಳ್ಳಾರೆ ಕೋಡಿಬೈಲು ನಿವಾಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ನಡೆದಿದೆ.

ಮೃತರನ್ನು ಬೆಳ್ಳಾರೆಯ ಕೋಡಿಬೈಲು ಕೃಷಿ ಏಜೆನ್ಸಿಸ್ ನ ಮಾಲಕರಾದ ಸತ್ಯನಾರಾಯಣ ಭಟ್ ಎಂದು ಗುರುತಿಸಲಾಗಿದೆ.

ಬೆಳ್ಳಾರೆಯಿಂದ ಮಂಗಳೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು ಆದರ್ಶ ಆಸ್ಪತ್ರೆಯ ಆಂಬುಲೆನ್ಸ್ ದಯಾನಂದ ಅವರ ಸಹಕಾರದೊಂದಿಗೆ ಪುತ್ತೂರು ಸರಕಾರಿ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಸ್.ಐ ರಾಮನಾಯ್ಕ್ ಮತ್ತು ಸಿಬ್ಬಂದಿಗಳು ತೆರಳಿ ಮಾಹಿತಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!