Thursday, April 25, 2024
spot_imgspot_img
spot_imgspot_img

ಪುತ್ತೂರು: ಸಂಘ ಪರಿವಾರಗಳಿಂದ ನಡೆದ ಪ್ರತಿಭಟನೆಯನ್ನು ವಿರೋಧಿಸಿ SDPI ಪ್ರತಿಭಟನೆ!

- Advertisement -G L Acharya panikkar
- Advertisement -
driving

ಪುತ್ತೂರು: ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ ಡಿಪಿಐ ಕಾರ್ಯಕರ್ತರು ತಡೆ ಒಡ್ಡಿದ ಘಟನೆ ನಡೆದಿದ್ದು, ಈ ಹಿನ್ನೆಲೆ ನಿನ್ನೆ ವೀರ ಸಾವರ್ಕರ್ ಹೆಸರಿನಲ್ಲಿ ಸಂಘ ಪರಿವಾರಗಳಿಂದ ಪ್ರತಿಭಟನೆ ನಡೆದಿತ್ತು.

ವೀರ ಸಾವರ್ಕರ್ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಸಂಘ ಪರಿವಾರ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್ ಡಿಪಿಐ) ವತಿಯಿಂದ ಬೆಳಗ್ಗೆ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ಈ ಪ್ರತಿಭಟನೆ ತಡೆಯುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ

ಇದನ್ನೂ ಓದಿ: ಮೂಡಬಿದಿರೆ: ಜಗಳ ತಾರಕಕ್ಕೇರಿ ಹೆಂಡತಿಯನ್ನು ಕೊಲೆಗೈದ ಗಂಡ!

ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144(3) ರಂತೆ ನಿರ್ಬಂಧಗಳನ್ನು ಹೊರಡಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆದೇಶಿಸಿರುವುದಾಗಿದೆ ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಮಾದ್ಯಮಗಳಿಗೆ ಇಂದು ಬೆಳಿಗ್ಗೆ ಮಾಹಿತಿ ನೀಡಿದ್ದರು.

ಅಲ್ಲದೇ ದರ್ಭೆ ವೃತ್ತ ಸಂಪರ್ಕಿಸುವ ಎಲ್ಲ ರಸ್ತೆಗಳಲ್ಲಿ ಪೊಲೀಸರು ನಾಕ ಬಂದಿ ನಡೆಸಿ ಬಿಗಿ ಭದ್ರತೆ ವ್ಯವಸ್ಥೆ ಕೈಗೊಂಡಿದ್ದರು. ಅಲ್ಲದೇ ದರ್ಭೆ ಸರ್ಕಲ್ ಸುತ್ತ ಪೊಲೀಸ್ ಸರ್ಪಗಾವಲು ಹಾಕಿತ್ತು. ಪ್ರತಿಭಟನಾ ಸ್ಥಳದಲ್ಲಿ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಹಾಗೂ ಡಿವೈಎಸ್ಪಿ ಡಾ.ಗಾನಾ ಪಿ. ಕುಮಾರ್ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: ಕಬಕ: ಸ್ವಾತಂತ್ರ್ಯ ರಥಕ್ಕೆ ತಡೆಒಡ್ಡಿದ ಪ್ರಕರಣ: SDPI ಕಾರ್ಯಕರ್ತರ ಬಿಡುಗಡೆ

ಈ ಮಧ್ಯೆ ಪ್ರತಿಭಟನಾಕಾರರ ಕೋವಿಡ್ ಸ್ವಾಬ್ ಟೆಸ್ಟ್ ಗೆ ಸಹಾಯಕ ಆಯುಕ್ತ ಡಾ .ಯತೀಶ್ ಉಳ್ಳಾಲ ಆದೇಶ ನೀಡಿದ್ದಾರೆ. ಸರಕಾರಿ ಆಸ್ಪತ್ರೆ ಸಿಬ್ಬಂದಿ ಸ್ಥಳದಲ್ಲೇ ಸ್ವಾಬ್ ಟೆಸ್ಟ್ ಕೂಡ ನಡೆಸುತ್ತಿರುವುದು ಕಂಡು ಬಂದಿದೆ.

- Advertisement -

Related news

error: Content is protected !!